ಕರ್ನಾಟಕದಲ್ಲಿ ಸೋಮವಾರ 146 ಜನರು ಸಾವು, ಸಾವಿನ ಸಂಖ್ಯೆಯೂ ಏರುತ್ತಿದೆ..!

ಬೆಂಗಳೂರು :ರಾಜ್ಯದಲ್ಲಿ ಮತ್ತೆ ಕೊರೋನಾ ಆರ್ಭಟಿಸಿದೆ. ಕಳೆದ 24 ಗಂಟೆಯಲ್ಲಿ ರಾಜ್ಯಾದ್ಯಂತ 15,785 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇದೇ ಸಮಯದಲ್ಲಿ 146 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 9,618 ಜನರು ಸೇರಿದಂತೆ ರಾಜ್ಯಾದ್ಯಂತ 15,785 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 11,76,850ಕ್ಕೆ ಏರಿಕೆಯಾಗಿದೆ. ಸೋಮವಾರ 7098 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 10,21,250 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 1,42,084 ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 97 ಜನರು ಮೃತಪಟ್ಟಿದ್ದಾರೆ. ರಾಜ್ಯಾದ್ಯಂತ ಸೋಂಕಿತರಾದಂತ 146 ಜನರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕಿಲ್ಲರ್ಕೊರೊನಾಕ್ಕೆ ಮೃತಪಟ್ಟವರ ಸಂಖ್ಯೆ 13,497ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement