ಕೊರೊನಾ ಉಲ್ಬಣ: ನಾಳೆ ಮಹತ್ವದ ಸರ್ವಪಕ್ಷ ಸಭೆ

ಬೆಂಗಳೂರು: ಕೊರೊನಾ ಮಹಾಮಾರಿ ರಣಕೇಕೆ ಹಾಕುತ್ತಿರುವ ಹಿನ್ನೆಲೆ ಯಲ್ಲಿ ಕಂಡುಕೊಳ್ಳಬೇಕಾದ ಮಾರ್ಗೋಪಾಯದ ಕುರಿತಾಗಿಮಂಗಳವಾರ (ಏ.೨೦)ಮಹತ್ವದ ಸರ್ವಪಕ್ಷ ಸಭೆ ನಡೆಯಲಿದೆ.
ಈ ಸಭೆ ವರ್ಚ್ಯುಲ್ ಮೂಲಕ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್, ಡಾ.ಕೆ.ಸುಧಾಕರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ಭಾನುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಬೇಕಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವುದರಿಂದ ಅನಿವಾರ್ಯವಾಗಿ ಸಭೆ ಮುಂದೂಡಲಾಗಿತ್ತು. ಇದೀಗ ನಾಳೆ ವರ್ಚ್ಯುಲ್ ಮೂಲಕ ಸರ್ವಪಕ್ಷ ಸಭೆ ನಡೆಯಲಿದ್ದು, ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement