ಕೊರೊನಾ ಸೋಂಕಿತನ ಚಿಕಿತ್ಸೆಗೆ ತೆರಳುತ್ತಿದ್ದ ವೈದ್ಯಕೀಯ ತಂಡದ ಮೇಲೆ ಹಲ್ಲೆ

ಲಕ್ನೋ: ಕೊರೊನಾ ಸೋಂಕಿತ ವ್ಯಕ್ತಿಗೆ ಔಷಧಿ ನೀಡಲು ತೆರಳುತ್ತಿದ್ದ ವೈದ್ಯರ ಮೇಲೆ ಜನರ ಗುಂಪೊಂದು ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ನಡೆದಿದೆ.
ದಾಳಿಯಲ್ಲಿ ವೈದ್ಯರು ಸೇರಿದಂತೆ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು , ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಲಿಯಾ ಜಿಲ್ಲೆಯ ಪಾಸ್ವಾನ್ ಚೌಕ್ ಪ್ರದೇಶದಲ್ಲಿ ಇಬ್ಬರು ವೈದ್ಯರು ಸೇರಿದಂತೆ ಮೂವರು ಸರ್ಕಾರಿ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಚಾಲಕ ಕೊರೊನಾ ಪೀಡಿತನಿಗೆ ಔಷಧೋಪಚಾರ ಮಾಡಲು ತೆರಳುತ್ತಿದ್ದರು.
ಈ ಸಂದರ್ಭದಲ್ಲಿ ವಾಹನವನ್ನು ಅಡ್ಡಗಟ್ಟಿದ ಗುಂಪು ವೈದ್ಯಕೀಯ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ ಎಂದು ಎಸ್ಪಿ ಸಂಜಯ್ ಯಾದವ್ ತಿಳಿಸಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಸಹ ಇದ್ದ ತಂಡ ದಾಳಿ ನಡೆಸಿದ್ದು, ನಾವು ತಪ್ಪಿಸಿಕೊಳ್ಳಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ವೈದ್ಯ ನೀರಜ್‍ಕುಮಾರ್ ಸಿಂಗ್ ದೂರಿನಲ್ಲಿ ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ