ನಾಳೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಪರಿಸ್ಥಿತಿ ಪರಿಶೀಲನೆಗೆ ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆಯಲ್ಲಿ ಏ.20ರಂದು ವಿಡಿಯೋ ಸಂವಾದ ನಡೆಸಲಾಗುತ್ತಿದೆ.
ಮಂಗಳವಾರ ರಾಜ್ಯಪಾಲರಾದ ವಜುಭಾಯ್ ವಾಲಾ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಸಭೆ ನಡೆಯಲಿದೆ. ಮಂಗಳವಾರ ಸಂಜೆ 4:30ಕ್ಕೆ ಸಭೆ ನಡೆಯಲಿದ್ದು, ಮಣಿಪಾಲ ಆಸ್ಪತ್ರೆಯಿಂದಲೇ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ. ಸಭೆಯಲ್ಲಿ ಉಭಯ ಸದನಗಳ ಸಭಾ ನಾಯಕರು, ಪ್ರತಿಪಕ್ಷಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ಕೊರೊನಾ ವಿರುದ್ಧ ಹೋರಾಟದ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರಾದ ಜಿ.ಪರಮೇಶ್ವರ್, ಎಚ್‌.ಡಿ. ರೇವಣ್ಣ ಅವರಿಗೆ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement