ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

posted in: ರಾಜ್ಯ | 0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಹೆಚ್ಚಳದಿಂದಾಗಿ ಏ. 20 ಮತ್ತು 21ರಿಂದ ನಡೆಯಬೇಕಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿಯ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ.
ಬೆಂಗಳೂರು ವಿವಿವಿ ಪದವಿ ಕೋರ್ಸ್‌ಗಳ ಮೊದಲ, ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು, ಸ್ನಾತಕೋತ್ತರ ಪದವಿಯ ಮೊದಲ ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿ ವಿವಿ ಪ್ರಕಟಣೆ ಹೊರಡಿಸಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ವೇಣುಗೋಪಾಲ್ ಕೆ.ಆರ್ ಹೇಳಿಕೆ ಬಿಡುಗಡೆ ಮಾಡಿದ್ದು, ಸಾರಿಗೆ ಮತ್ತು ಕೊರೊನಾ ಸೋಂಕು ಹೆಚ್ಚಳದ ಕಾರಣದಿಂದಾಗಿ ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂ ದಿನ ಆದೇಶದವರೆಗೂ ಮುಂದೂಡುವುದಾಗಿ ಘೋಷಿಸಿದ್ದಾರೆ. ವಿಶ್ವವಿದ್ಯಾಲಯವು ಪರೀಕ್ಷೆಯ ಹೊಸ ದಿನಾಂಕಗಳನ್ನು ನಂತರ ಪ್ರಕಟಿಸಲಿದೆ ಎಂದು ತಿಳಿಸಿದ್ದಾರೆ.
ಎಂ.ಎ, ಎಂ.ಎಸ್ಸಿ ಮತ್ತು ಎಂಕಾಮ್ ಸೇರಿದಂತೆ ಕಾರ್ಯಕ್ರಮಗಳ ಮೂರನೇ ಸೆಮಿಸ್ಟರ್ ಸ್ನಾತಕೋತ್ತರ ಸೆಮಿಸ್ಟರ್ ಪರೀಕ್ಷೆಗಳನ್ನು ವಿಶ್ವವಿದ್ಯಾಲಯವು ಮುಂದೂಡಿದೆ. ಅಲ್ಲದೆ, ಎಂಸಿಎ ಮತ್ತು ಬಿ.ಎಸ್ಸಿ, ಎಂ.ಎಸ್ಸಿ ಜೈವಿಕ ವಿಜ್ಞಾನ ಮತ್ತು ಎಂಟಿಎ ಐದು ವರ್ಷಗಳ ಇಂಟಿಗ್ರೇಟೆಡ್ ಕೋರ್ಸ್ ಸೇರಿದಂತೆ ಕಾರ್ಯಕ್ರಮಗಳಿಗೆ ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಈ ಪರೀಕ್ಷೆಗಳನ್ನು ಏಪ್ರಿಲ್ 20 ರಿಂದ ನಡೆಸಲು ನಿರ್ಧರಿಸಲಾಗಿತ್ತು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ