ನವ ದೆಹಲಿ: ಅರಬ್ಬಿ ಸಮುದ್ರದಲ್ಲಿ ದೋಣಿಯ ಮೂಲಕ ಸಾಗಾಟ ಮಾಡುತಿದ್ದ 3000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ಭಾರತೀಯ ನೌಕಾ ದಳ ವಶ ಪಡಿಸಿಕೊಂಡಿದೆ.
ಮೀನುಗಾರಿಕೆ ಮಾಡುತ್ತಿದ್ದ ದೋಣಿಯಲ್ಲಿ ಸಾಗಾಟ ಮಾಡುತಿದ್ದ 300 ಕೆಜಿ ಮಾದಕ ವಸ್ತುವನ್ನು ಭಾರತೀಯ ನೌಕಾಪಡೆ ಸಿಬ್ಬಂದಿ ಪತ್ತೆಹಚ್ಚಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಐಎನ್‌ಎಸ್ ಸುವರ್ಣ ಹಡಗು ಗಸ್ತು ತಿರುಗುತ್ತಿದ್ದ ವೇಳೆ ಮೀನುಗಾರಿಕೆ ದೋಣಿಯಲ್ಲಿ 3000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಮಾದಕ ವಸ್ತು ಸರಬರಾಜು ಮಾಡುತ್ತಿದ್ದುದನ್ನು ಪತ್ತೆ ಹಚ್ಚಲಾಗಿದೆ.
ಮೀನುಗಾರಿಕೆಗೆ ಬಳಸುತ್ತಿದ್ದ ದೋಣಿಯಲ್ಲಿದ್ದವರು ಅನುಮಾನಾಸ್ಪದವಾಗಿ ನಡೆದುಕೊಂಡಾಗ ದೋಣಿ ಡ್ಡಗಟ್ಟಿ ಪರಿಶೀಲನೆ ನಡೆಸಿದಾಗ ಮಾದಕವಸ್ತು ಇರುವುದು ಪತ್ತೆಯಾಗಿದೆ.ಕೇರಳದ ಕೋಚಿ ಬಂದರು ತನಕ ದೋಣಿಯನ್ನು ತರಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಭಾರತೀಯ ನೌಕಾ ಪಡೆಯ ಸಿಬ್ಬಂದಿ ತಿಳಿಸಿದ್ದಾರೆ.
ಭಾರತೀಯ ನೌಕಾಪಡೆ ಸಮುದ್ರದಲ್ಲಿ ವಶಪಡಿಸಿಕೊಂಡ ಅತ್ಯಂತ ದೊಡ್ಡ ಮಾದಕ ವಸ್ತುಗಳ ಪ್ರಕರಣ ಇದಾಗಿದೆ ಎಂದು ತಿಳಿಸಿದೆ.ಮಾದಕ ವಸ್ತುವನ್ನು ಎಲ್ಲಿಂದ ಎಲ್ಲಿಗೆ ಸಾಗಿಸಲಾಗುತ್ತಿತ್ತು ಇದು ಯಾರಿಗೆ ಸಂಬಂಧಪಟ್ಟಿದ್ದು ಎನ್ನುವ ಕುರಿತು ತನಿಖೆ ಮುಂದುವರೆದಿದೆ. ಭಾರತದಿಂದ ಮಾಲ್ಡೀವ್ಸ್ ಅಥವಾ ಶ್ರೀಲಂಕಾಕ್ಕೆ ಮಾದಕ ವಸ್ತುವನ್ನು ಸರಬರಾಜು ಮಾಡಲಾಗುತ್ತಿತ್ತು ಎನ್ನುವ ವಿಷಯವನ್ನು ಮೂಲಗಳು ಖಚಿತಪಡಿಸಿವೆ
ನಿಮ್ಮ ಕಾಮೆಂಟ್ ಬರೆಯಿರಿ