ಉತ್ತರ ಪ್ರದೇಶದ ಐದು ನಗರಗಳಲ್ಲಿ ಲಾಕ್ ಡೌನ್: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವ ದೆಹಲಿ: ಕೋವಿಡ್ -19 ಪ್ರಕರಣಗಳಲ್ಲಿ ತೀವ್ರ ಏರಿಕೆ ವರದಿಯಾಗುತ್ತಿರುವ ಐದು ಉತ್ತರ ಪ್ರದೇಶ ಜಿಲ್ಲೆಗಳಾದ ಪ್ರಯಾಗ್ರಾಜ್, ಲಕ್ನೋ, ವಾರಾಣಸಿ, ಕಾನ್ಪುರ ನಗರ ಮತ್ತು ಗೋರಖ್‌ಪುರ ಜಿಲ್ಲೆಗಳಲ್ಲಿ ಏಪ್ರಿಲ್ 26ರ ವರೆಗೆ ಒಂದು ವಾರದ ಲಾಕ್‌ಡೌನ್ ಮಾಡಲು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಡೆಹಿಡಿದಿದೆ.
ಸೋಮವಾರ ಜಾರಿಗೆ ಬಂದ ಹೈಕೋರ್ಟ್ ಆದೇಶವನ್ನು ಜಾರಿಗೆ ತರಲು ನಿರಾಕರಿಸಿದ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರ ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ಪ್ರಶ್ನಿಸಿದೆ. ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ತೆಗೆದುಕೊಂಡ ವಿವಿಧ ಕ್ರಮಗಳನ್ನು ಅಲಹಾಬಾದ್ ಹೈಕೋರ್ಟ್‌ಗೆ ಒಂದು ವಾರದೊಳಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ.
ವಿಚಾರಣೆಯ ಸಮಯದಲ್ಲಿ, ಉತ್ತರ ಸರ್ಕಾರ ಅಲಹಾಬಾದ್ ಹೈಕೋರ್ಟ್‌ನ ಆದೇಶವು ಅಪಾರ ಆಡಳಿತಾತ್ಮಕ ತೊಂದರೆಗಳನ್ನು ಸೃಷ್ಟಿಸುತ್ತದೆ ಮತ್ತು ನ್ಯಾಯಾಂಗ ಆದೇಶದ ಮೂಲಕ ಲಾಕ್‌ ಡೌನ್‌ ಮಾಡುವುದು ಸರಿಯಾದ ವಿಧಾನವಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿತು.
ಉತ್ತರ ಪ್ರದೇಶದ ಲಾಕ್‌ಡೌನ್ ಪ್ರಕರಣದಲ್ಲಿ ಮುಂದಿನ ವಿಚಾರಣೆಗೆ ಸಹಾಯ ಮಾಡಲು ಹಿರಿಯ ವಕೀಲ ಪಿ. ಎಸ್. ನರಸಿಂಹ ಅವರನ್ನು ಅಮಿಕಸ್ ಕ್ಯೂರಿಯಂತೆ ಸುಪ್ರೀಂ ಕೋರ್ಟ್ ನೇಮಕ ಮಾಡಿದೆ.ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಉತ್ತರಪ್ರದೇಶದಲ್ಲಿ ವೈದ್ಯಕೀಯ ಮೂಲಸೌಕರ್ಯವನ್ನು “ವಾಸ್ತವಿಕವಾಗಿ ಅಸಮರ್ಥಗೊಳಿಸಿವೆ” ಎಂದು ಹೈಕೋರ್ಟ್ ಸೋಮವಾರ ಆದೇಶದಲ್ಲಿ ಹೇಳಿತ್ತು. ಮತ್ತು ಕೊರೊನಾ ಪ್ರಕರಣ ಹೆಚ್ಚಳ ಕಂಡುಬಂದ ಈ ಐದು ನಗರಗಳಲ್ಲಿ ಒಂದು ವಾರ ಲಾಕ್‌ಡೌನ್‌ ವಿಧಿಸಲು ಸೂಚಿಸಿತ್ತು.
ಆದರೆ ಉತ್ತರ ಪ್ರದೇಶ ಸರ್ಕಾರ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಮಂಗಳವಾರ ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ದೂರವಾಣಿ ಕರೆಗಳಿಗೆ ‘ಹಲೋ’ ಬದಲಿಗೆ ‘ವಂದೇ ಮಾತರಂ’ ಎಂದು ಉತ್ತರಿಸಿ: ಅಧಿಕಾರಿಗಳಿಗೆ ಮಹಾರಾಷ್ಟ್ರ ಸರ್ಕಾರದ ಸೂಚನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement