ಕರ್ನಾಟಕದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್‌

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣ (ಪಾಸ್‌) ಮಾಡಲು ನಿರ್ಧರಿಸಲಾಗಿದೆ.
ಕೋವಿಡ್‌ ಹೆಚ್ಚಳದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಮ್ಷೆ ನಡೆಸುವುದು ಕಷ್ಟ ಎಂದು ತಜ್ಞರು ಅಭಿಪ್ರಯಾ ಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಾಗಿ ತಿಳಿಸಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಹೆಚ್ಚಾಗುತ್ತಿದೆ. ಇದರ ನಡುವೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದೆ. ತಜ್ಞರು ಕೂಡ ಇದನ್ನೇ ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ರಾಜ್ಯದಲ್ಲಿನ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ವರ್ಷ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ.ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನದ ಆಧಾರದಲ್ಲಿ ಪಾಸ್ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಕುರಿತು ಮಾತನಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, 1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳಿಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 1-9ನೇ ತರಗತಿವರೆಗೆ ಮೌಲ್ಯಾಂಕನ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement