ಮಹತ್ವದ ಸುದ್ದಿ… ಕೊರೊನಾ ಉಲ್ಬಣದ ಕಾರಣ ಜಿಪಂ, ತಾಪಂ ಚುನಾವಣೆ ಮುಂದೂಡಿಕೆಗೆ ಸಚಿವ ಸಂಪುಟದಲ್ಲಿ ತೀರ್ಮಾನ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದಂತೆ ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಹಾಗೂ ಹಾಗೂ ತಾಲೂಕು ಪಂಚಾಯತ ಚುನಾವಣೆ ಮುಂದೂಡಿಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ.ಈಶ್ವರಪ್ಪ, ರಾಜ್ಯದಲ್ಲಿ ಜಿಪಂ, ತಾಪಂ ಚುನಾವಣೆ ಸಮೀಪಿಸುತ್ತಿದೆ. ಕೋವಿಡ್ ಹೆಚ್ಚಳದಿಂದ ಚುನಾವಣೆ ಬೇಡವೆಂಬ ಸಲಹೆ ಇದೆ. ಹಾಗಾಗಿ ಸದ್ಯಕ್ಕೆ ಚುನಾವಣೆ ಮುಂದಕ್ಕೆ ಹಾಕಲು ಚಿಂತನೆ ನಡೆಯುತ್ತದೆ ಎಂದು ತಿಳಿಸಿದರು.
ಈ ಬಗ್ಗೆ ಸಂಪುಟ ಸಬ್ ಕಮಿಟಿ ಸಭೆಯಲ್ಲಿ ಚರ್ಚಿಸುತ್ತೇವೆ ನಂತರ ಇದರ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಅವಧಿ ಮುಗಿದ ಕಡೆ ಆಡಳಿತಾಧಿಕಾರಿ ಹಾಕಬೇಕಾಗುತ್ತದೆ. ಈ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ. ಚುನಾವಣೆ ನಡೆದರೆ ಇದರಲ್ಲಿ ಸುಮಾರು ಮೂರುವರೆ ಕೋಟಿ ಜನ ಪಾಲ್ಗೊಳ್ಳಲಿದ್ದಾರೆ. ಕೋವಿಡ್ ಹೆಚ್ಚು ಉಲ್ಬಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯ ಇದೆ. ಇದನ್ನ ಸಚಿವ ಸಂಪುಟದಲ್ಲಿ ಚರ್ಚಿಸಿ ಚುನಾವಣಾ ಆಯೋಗಕ್ಕೆಶಿಫಾರಸು ಮಾಡಿ ಕಳುಹಿಸಲಾಗುವುದು ಎಂದರು.
ಚುನಾವಣೆ ಮುಂದೂಡಿಕೆ ಬಗ್ಗೆ ನಮ್ಮ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಅವರು ಮುಂದೂಡಿಕೆ ಬಗ್ಗೆ ಸಲಹೆ ಕೊಟ್ಟಿದ್ದಾರೆ. ಹೀಗಾಗಿ ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಾಗುವುದು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರ ಪಾಲಾದ ಇಬ್ಬರು ಪ್ರವಾಸಿಗರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement