ಮಹತ್ವದ ಸುದ್ದಿ.. ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ-ಶಾಲಾ ಆರಂಭದ ವೇಳಾಪಟ್ಟಿ ಪ್ರಕಟ

posted in: ರಾಜ್ಯ | 0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಕಾರಣ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ, ಹಿಂದಿನ ಶೈಕ್ಷಣಿಕ ದಾಖಲೆಗಳ ಆಧಾರದಲ್ಲಿ ಮುಂದಿನ ತರಗತಿಗೆ ಪಾಸ್ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ಇದರ ಜೊತೆಗೆ ಮುಂದಿನ 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು(ಪ್ರೌಢ ಶಿಕ್ಷಣ) ಸುತ್ತೋಲೆ ಹೊರಡಿಸಿದ್ದು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ವೇಳಾಪಟ್ಟಿ ಹಾಗೂ ಶಿಕ್ಷಕರಿಗೆ ಬೇಸಿಗೆ ರಜೆಯ ಪಟ್ಟಿ ಪ್ರಕಟಿಸಿದ್ದಾರೆ.
2020-21ನೇ ಸಾಲಿನ ಬೇಸಿಗೆ ರಜೆ ಹಾಗೂ 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ವೇಳಾಪಟ್ಟಿ

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಪ್ರಾಥಮಿಕ ಶಾಲೆ:
1 ರಿಂದ 7/8ನೇ ತರಗತಿಗಳು ಇರುವ ಪ್ರಾಥಮಿಕ ಶಾಲೆಗಳಿಗೆ ದಿನಾಂಕ 01-05-2021 ರಿಂದ 14-06-2021ರ ವರೆಗೆ ಬೇಸಿಗೆ ರಜೆ ನೀಡಲಾಗಿದೆ. ದಿನಾಂಕ 15-06-2021 ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ ಎಂದು ತಿಳಿಸಲಾಗಿದೆ.

ಓದಿರಿ :-   ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ನಿಗದಿ: ಅಕ್ಟೋಬರ್‌ 28ರಂದು ಮತದಾನ

ಪ್ರೌಢ ಶಾಲೆ:
ಪ್ರೌಢ ಶಾಲೆಗಳಲ್ಲಿನ 8 ಹಾಗೂ 9ನೇ ತರಗತಿಗಳಲ್ಲಿನ ವಿದ್ಯಾರ್ಥಿಗಳಿಗೆ ದಿನಾಂಕ 01-05-2021 ರಿಂದ 14-07-2021ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಪ್ರೌಢ ಶಾಲೆಗಳಲ್ಲಿನ ಶಿಕ್ಷಕರಿಗೆ ದಿನಾಂಕ 15-06-2021 ರಿಂದ ದಿನಾಂಕ 14-07-2021ರವರೆಗೆ ಬೇಸಿಗೆ ರಜೆ
ದಿನಾಂಕ 21-06-2021 ರಿಂದ 05-07-2021ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತದೆ. ದಿನಾಂಕ 15-07-2021 ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ ಎಂದು ಪ್ರಕಟನೆ ತಿಳಸಿದೆ.
ವೇಳಾ ಪಟ್ಟಿಯು ತಾತ್ಕಾಲಿಕವಾಗಿದ್ದು, ಕೋವಿಡ್-19ರ ಹಿನ್ನೆಲೆಯಲ್ಲಿ ಕಾಲಕಾಲಕ್ಕೆ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆಯನ್ನು ಮತ್ತು ನಿರ್ದೇಶನಗಳನ್ನು ಪಾಲಿಸಿವುದು ಕಡ್ಡಾಯವಾಗಿರುತ್ತದೆ ಎಂದು ಸೊತ್ತೋಲೆಯಲ್ಲಿ ತಿಳಿಸಲಾಗಿದೆ. ತಿಳಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement