ಕೊರೊನಾ ಹೆಚ್ಚಳ: ಯುಜಿಸಿ- ಎನ್ಇಟಿ ಪರೀಕ್ಷೆ ಮುಂದಕ್ಕೆ

ನವ ದೆಹಲಿ: ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಮೇ 2ರಿಂದ 17ಕ್ಕೆ ನಡೆಯಬೇಕಿದ್ದ ಯುಜಿಸಿ- ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಮಂಗಳವಾರ ಪ್ರಕಟಿಸಿದ್ದಾರೆ.
ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ನಂತರದಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ, ಪರಿಷ್ಕೃತ ಪರೀಕ್ಷೆ ದಿನಾಂಕವನ್ನು ಪರೀಕ್ಷೆಗಿಂತ ಕನಿಷ್ಠ 15 ದಿನ ಮುಂಚಿತವಾಗಿ ವಿಷಯ ತಿಳಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಆದೇಶದಲ್ಲಿ ತಿಳಿಸಿದೆ.
ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಯುಜಿಸಿ- ನೆಟ್ ಪರೀಕ್ಷೆಯನ್ನು ಮುಂದೂಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ಸಲಹೆ ನೀಡಿದ್ದಾಗಿ ನಿಶಾಂಕ್ ಟ್ವೀಟ್ ಮಾಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

ನಿಮ್ಮ ಕಾಮೆಂಟ್ ಬರೆಯಿರಿ

advertisement