ತಕ್ಷಣವೇ ಬಸ್‌ ಸೇವೆ ಆರಂಭ ಮಾಡಿ; ಮುಷ್ಕರ ನಿರತ ಸಾರಿಗೆ ಸಿಬ್ಬಂದಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕೋವಿಡ್‌ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ, ಅದರಿಂದ ಸಾರ್ವಜನಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಲಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕೂಡಲೇ ಸೇವೆ ಆರಂಭಿಸುವಂತೆ ಮುಷ್ಕರ ನಿರತ ಸಾರಿಗೆ ನೌಕರರಿಗೆ ಸೂಚಿಸಿದೆ.
ಸಾರಿಗೆ ನೌಕರರ ಮುಷ್ಕರ ತಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ಸರ್ಕಾರದ ಪರವಾಗಿ ಹಾಜರಾಗಿದ್ದ ಎಜಿ ಪ್ರಭುಲಿಂಗ ನಾವದಗಿ, ಮುಷ್ಕರ ನಿರತರ ವಿರುದ್ಧ ಎಸ್ಮಾ ಜಾರಿಗೊಳಿಸಲಾಗಿದೆ. ಸರ್ಕಾರ ಕಾರ್ಮಿಕರ ನ್ಯಾಯಾಲಯಕ್ಕೂ ಅರ್ಜಿ ಸಲ್ಲಿಸಿದೆ. ಸಾರಿಗೆ ನೌಕರರ ಮುಷ್ಕರ ಕಾನೂನು ಬಾಹಿರವೆಂದು ಘೋಷಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಕೆಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ಸರ್ಕಾರಿ ನೌಕರರಾಗಿಸುವ ಬೇಡಿಕೆ ಪರಿಗಣಿಸಲು ಸಾಧ್ಯವಿಲ್ಲವೆಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
. ಕೋವಿಡ್‌ನಿಂದ ಜನಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ. ಲಸಿಕೆ ಕೇಂದ್ರಗಳಿಗೂ ಜನ ತೆರಳಲು ಆಗುತ್ತಿಲ್ಲ. ಇಂಥ ಸಂದರ್ಭದಲ್ಲಿ ಜನರ ಕೈಗೆಟುಕುವ ದರದ ಸರ್ಕಾರಿ ಬಸ್‌ಗಳ ಸೇವೆ ಅಗತ್ಯವಿದೆ. ಮುಷ್ಕರ ಹೂಡುವುದಕ್ಕೆ ಇದು ಸೂಕ್ತ ಕಾಲವಲ್ಲ. ಮುಷ್ಕರದಿಂದ ಜನಸಾಮಾನ್ಯರ ಮೂಲಭೂತ ಹಕ್ಕಿಗೆ ದಕ್ಕೆಯಾಗಲಿದೆ ಎಂದು ಅಭಿಪ್ರಾಯಪಟ್ಟ ಪೀಠ, ಮುಷ್ಕರ ನಿರತ ನೌಕರರು ತಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಬೇಕು ಎಂದು ಸೂಚಿಸಿತು.
ಅಂತಿಮವಾಗಿ ಪಿಐಎಲ್‌ಗಳ ಸಂಬಂಧ ಸಾರಿಗೆ ಸಂಸ್ಥೆಗಳು ಹಾಗೂ ಕರ್ನಾಟಕ ರಾಜ್ಯ ಸಾರಿಗೆ ನೌಕರರ ಕೂಟಕ್ಕೆ ನೋಟಿಸ್ ಜಾರಿಗೊಳಿಸಿದ ಪೀಠ, ಏ.22ರ ಬೆಳಗ್ಗೆ 11.40ಕ್ಕೆ ವಿಚಾರಣೆ ನಿಗದಿಪಡಿಸಿತು.
ನ್ಯಾಯಾಲಯದ ಆದೇಶದ ಬಗ್ಗೆ ಸಾರಿಗೆ ನೌಕರರ ಒಕ್ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ, ನ್ಯಾಯಾಲಯದ ಪೂರ್ಣ ಪ್ರಮಾಣದ ಆದೇಶವನ್ನು ನೋಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಐಪಿಎಲ್‌ (IPL)2024: ಹಾರ್ದಿಕ್ ಪಾಂಡ್ಯ- ಲಸಿತ್ ಮಾಲಿಂಗ ನಡುವೆ ಮುನಿಸು..? ಈ ವೀಡಿಯೊಗಳನ್ನು ನೋಡಿ

ಬೆಂಗಳೂರು: ಕೋವಿಡ್‌ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ, ಅದರಿಂದ ಸಾರ್ವಜನಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಲಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕೂಡಲೇ ಸೇವೆ ಆರಂಭಿಸುವಂತೆ ಮುಷ್ಕರ ನಿರತ ಸಾರಿಗೆ ನೌಕರರಿಗೆ ಸೂಚಿಸಿದೆ.
ಸಾರಿಗೆ ನೌಕರರ ಮುಷ್ಕರ ತಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿ, ಮುಷ್ಕರ ನಿರತರ ವಿರುದ್ಧ ಎಸ್ಮಾ ಜಾರಿಗೊಳಿಸಲಾಗಿದೆ. ಸಾರಿಗೆ ನೌಕರರ ಮುಷ್ಕರವನ್ನು ಕಾನೂನು ಬಾಹಿರ ಎಂದು ಘೋಷಿಸಲಾಗಿದ್ದು, ಕಾರ್ಮಿಕ ನ್ಯಾಯಾಲಯದಲ್ಲಿ ಈ ಸಂಬಂಧ ದಾವೆ ಹೂಡಲಾಗಿದೆ. ನೌಕರರ ಕೆಲ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಆದರೆ, ಅವರನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕೆಂಬ ಬೇಡಿಕೆ ಪರಿಗಣಿಸುವುದು ಸಾಧ್ಯವಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement