ಕರ್ನಾಟಕ ರಾಜ್ಯಾದ್ಯಂತ ರಾತ್ರಿ  ಕರ್ಫ್ಯೂ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ‘ರಾತ್ರಿ ವೀಕೆಂಡ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಬುಧವಾರದಿಂದ ರಾಜ್ಯಾದ್ಯಂತ ರಾತ್ರಿ ಕರ್ಪ್ಯೂ ಜಾರಿಯಾಗಿದೆ.
ಬುಧವಾರದಿಂದ ಮೇ 4ರ ವರೆಗೆ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆ ವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿರಲಿದೆ. ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಹಾಗೂ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆ ವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ.
ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಅನಗತ್ಯವಾಗಿ ಕರ್ಪ್ಯೂ ವೇಳೆ ಜನ ತಿರುಗಾಡಿದ್ರೆ ಕಾನೂನು ಕ್ರಮವನ್ನು ಸಹ ಕೈಗೊಳ್ಳಲಾಗುತ್ತದೆ. ಅಗತ್ಯ ವಾಹನಗಳ ವಾಹನ ಸಂಚಾರಕ್ಕೆ ‘ವೀಕೆಂಡ್ ಕರ್ಪ್ಯೂ’, ರಾತ್ರಿ ಕರ್ಪ್ಯೂ’ ವೇಳೆಯಲ್ಲಿ ಅವಕಾಶ ನೀಡಲಾಗಿದ್ದು, ಬಸ್‌ನಲ್ಲಿ ಪ್ರಯಾಣ ಮಾಡಲು ಕೂಡ ಅವಕಾಶವನ್ನು ನೀಡಲಾಗಿದೆ, ಆದರೆ ಆ ಸಮಯದಲ್ಲಿ ಇ ಅಗತ್ಯ ದಾಖಲೆಗಳು ಇರುವುದು ಅವಶ್ಯಕ, ಸಾಮಾಜಿಕ ಅಂತರ ಪಾಲಿಸುವುದು ಹಾಗೂ ಮಾಸ್ಕ್‌ ಕಡ್ಡಾಯವಾಗಿ ಧರಿಸದೇ ಹೋದರೆ ದಂಡ ವಿಧಿಸಲಾಗುತ್ತದೆ.
ರಾಜ್ಯದಲ್ಲಿ ಬುಧವಾರ 23,558 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಸಮಯದಲ್ಲಿ 116 ಮಂದಿ ಮೃತಪಟ್ಟಿದ್ದಾರೆ. ,

ಇಂದಿನ ಪ್ರಮುಖ ಸುದ್ದಿ :-   ಮಾಜಿ ಶಾಸಕ ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ಪ್ರಕರಣ ಮತ್ತೆ ಮುನ್ನೆಲೆಗೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement