ಬೆಂಗಳೂರು : ಏಪ್ರಿಲ್ 25 ರ ಭಾನುವಾರ ನಡೆಯಬೇಕಿದ್ದ ಮೈಸೂರು ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷೆಯನ್ನು ರಾಜ್ಯ ಸರ್ಕಾರ ಕರ್ಪ್ಯೂ ಘೋಷಿಸಿರುವ ಹಿನ್ನೆಲೆಯಲ್ಲಿ ಮತ್ತೆ ಮುಂದೂಡಲಾಗಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಾರಾಂತ್ಯದಲ್ಲಿ ಕರ್ಪ್ಯೂ ಘೋಷಿಸಿದ್ದು, ಹೀಗಾಗಿ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಆದ್ದರಿಂದ ಕೆಸೆಟ್ ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಮೈಸೂರು ವಿಶ್ವ ವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಎಲ್ಲ ನೋಂದಾಯಿತ ಅಭ್ಯರ್ಥಿಗಳು ಕೆ-ಸೆಟ್ 2021 ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್ ಸೈಟ್ ನಲ್ಲಿ http:/kset.uni.mysore.ac.in/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ