ಬೆಂಗಳೂರಿನಲ್ಲಿ ಹೆಚ್ಚಿದ ಕೊರೊನಾ ಸೋಂಕಿತರ ಮರಣ; ಅಂತ್ಯಸಂಸ್ಕಾರಕ್ಕೆಮತ್ತೆ 13 ಚಿತಾಗಾರಗಳಲ್ಲಿ ಅನುಮತಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಗಂಭೀರ ಸ್ವರೂಪಕ್ಕೆ ತಿರುಗಿದ್ದು ಸೋಂಕಿತರ ಸಂಖ್ಯೆ ಹಾಗೂ ಮೃತರ ಸಂಖ್ಯೆ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆಗಳೇ ಸಿಗದ ಸ್ಥಿತಿ, ಮೃತ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಚಿತಾಗಾರಗಳೂ ಸಿಗದ ಸ್ಥಿತಿ. ಕೆಲ ಸ್ಮಶಾನಗಳಲ್ಲಿ ಕಾದು ಸುಸ್ತಾದ ಮೃತರ ಸಂಬಂಧಿಕರು ಬೇರೆಡೆಗೆ ಶವ ಸಾಗಿಸಿದ ಘಟನೆಗಳು ಸಹ ವರದಿಯಾಗಿವೆ. ಹೀಗಾಗಿ ಎಚ್ಚೆತ್ತ ಸರ್ಕಾರಈಗ ಬೆಂಗಳೂರಿನ 13 ಚಿತಾಗಾರಗಳಲ್ಲಿ ಮೃತ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಅವಕಾಶ ಕಲ್ಪಿಸಿದೆ.
ಈ ಕುರಿತು ಮಾತನಾಡಿರುವ ಡಾ.ಅಶ್ವತ್ಥ ನಾರಾಯಣ ಈ ಮೊದಲು ಬೆಂಗಳೂರು ನಗರದ 7 ಚಿತಾಗಾರಗಳಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ದಿನ ಕಳೆದಂತೆ ಕೊರೊನಾ ಸೋಂಕಿತರನ್ನು ಸುಡಲು ತೊಂದರೆಯಾಗುತ್ತಿರುವುದನ್ನು ಗಮನಿಸಿದ ಸರ್ಕಾರ ಬೆಂಗಳೂರಿನ 13 ಚಿತಾಗಾರಗಳಲ್ಲೂ ಅಂತ್ಯಸಂಸ್ಕಾರಕ್ಕೆ ಅನುಮತಿ ನೀಡಿದೆ . ಒಂದು ಮೃತದೇಹದ ಅಂತ್ಯಸಂಸ್ಕಾರಕ್ಕೆ ಕನಿಷ್ಠ ಒಂದೂವರೆ ಗಂಟೆ ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ಹೆಚ್ಚಿನ ಚಿತಾಗಾರಗಳಲ್ಲಿ ಅಂತ್ಯಕ್ರಿಯೆ ನಡೆಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಜೊತೆಗೆ ಬೆಂಗಳೂರಲ್ಲಿ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಆ ಸಂಖ್ಯೆಯನ್ನು ಈಗ 13ಕ್ಕೆ ಏರಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹೇಳದ್ದನ್ನು ಖಾಸಗಿ ವಾಹಿನಿಗಳು ವರದಿ ಮಾಡಿವೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement