ಕೋವಿಡ್‌ ಹೊರತು ಪಡಿಸಿದ ಗಂಭೀರ-ತುರ್ತು ಚಿಕಿತ್ಸೆ ಅಗತ್ಯದ ರೋಗಿಗಳನ್ನು ಮಾತ್ರ ದಾಖಲು ಮಾಡಿಕೊಳ್ಳಿ:ಎಲ್ಲ ಸರ್ಕಾರಿ-ಖಾಸಗಿ ಆಸ್ಪತ್ರೆಗಳಿಗೆ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಕೋವಿಡ್‌ ಎರಡನೇ ಅಲೆ ಉಲ್ಬಣದಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಹೊರತು ಪಡಿಸಿದ ಕಾಯಿಲೆಗಳ ಗಂಭೀರ ಹಾಗೂ ತುರ್ತು ಚಿಕಿತ್ಸೆ ಅವಶ್ಯವಿರುವ ರೋಗಿಗಳನ್ನು ಮಾತ್ರ ದಾಖಲಿಸಿಕೊಳ್ಳಬೇಕು ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ನಿರ್ದೇಶಕರು ನೋಟಿಸ್‌ ಜಾರಿ ಮಾಡಿದ್ದಾರೆ.
ಈ ಕುರಿತು ಅಧಿಸೂಚನೆ ಹೊರಡಿಸಿರುವ ನಿರ್ದೇಶಕರು, ಇದನ್ನು ತಕ್ಷಣದಿಂದಲೇ ಜಾರಿಗೆ ತರಬೇಕು ಎಂದು ಆದೇಶ ಮಾಡಲಾಗಿದೆ.  ರಾಜ್ಯದ ಕೋವಿಡ್‌ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ದಾಖಲಾತಿ ಸರಿಯಾಗಿ ಸಿಗಬೇಕು ಹಾಗೂ ಕೊರೊನಾ ಸೋಂಕಿತರಿಗೆ ಸೂಕ್ತವಾದ ಚಿಕಿತ್ಸೆ ಸಿಗಬೇಕು. ಮತ್ತು ಅವರಿಗೆ ಉತ್ತಮ ಫಲಿತಾಂಶದ ಚಿಕಿತ್ಸೆ ಸಿಗುವಂತಾಗಬೇಕು ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ ಅಧಿಸೂಚನೆಯೂ ಮುಂದಿನ ಆದೇಶದ ವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಸರ್ಜನ್‌ ಹಾಗೂ ಎಲ್ಲ ಖಾಸಗಿ ವೈದ್ಯಕೀಯ ಎಸ್ಟಾಬ್ಲಿಶ್‌ಮೆಂಟ್‌ಗಳ ಅಧೀಕ್ಷರಿಗೆ ಈ ಅಧಿಸೂಚನೆ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ಬಿಜೆಪಿ ಹಂಚಿಕೊಂಡ ಅನಿಮೇಟೆಡ್ ವೀಡಿಯೊ ತೆಗೆದುಹಾಕಿ ; ಎಕ್ಸ್​ ಗೆ ಚುನಾವಣಾ ಆಯೋಗ ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement