ಧೋನಿ ತಂದೆ-ತಾಯಿಗೆ ಕೊರೊನಾ ಸೋಂಕು, ಆಸ್ಪತ್ರೆಗೆ ದಾಖಲು

ರಾಂಚಿ: ಭಾರತದ ಮಾಜಿ ನಾಯಕ, ಹಾಗೂ ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ನಾಯಕ ಎಂ.ಎಸ್. ಧೋನಿ ಅವರ ತಂದೆ-ತಾಯಿಗೆ ಕೊರೊನಾ ಸೋಂಕು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಧೋನಿ ಅವರ ತಂದೆ ಪಾನ್‌ ಸಿಂಗ್‌ ಮತ್ತು ತಾಯಿ ದೇವಕಿ ದೇವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರನ್ನು ಜಾರ್ಖಂಡಿನ ರಾಂಚಿಯಲ್ಲಿರುವ ಪಲ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

ನಿಮ್ಮ ಕಾಮೆಂಟ್ ಬರೆಯಿರಿ

advertisement