ಏಕದಿನದ ಕೋವಿಡ್‌ ಉಲ್ಬಣ: ಅಮೆರಿಕವನ್ನೂ ಹಿಂದಿಕ್ಕಿದ ಭಾರತ, 3 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು..!!

ನವ ದೆಹಲಿ : ದೇಶದಲ್ಲಿ ಕೊರೊನಾ ಉಲ್ಬಣ ಜೋರಾಗಿಯೇ ಮುಂದುವರಿದಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಗುರುವಾರ ಬೆಳಿಗ್ಗೆ ನೀಡಿದ ದತ್ತಾಂಶದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತವು ದಾಖಲೆಯ 3,14, 835 ಕೋವಿಡ್-19 ಪ್ರಕರಣಗಳನ್ನು ದಾಖಲಿಸಿದೆ.ಇದು ಇಲ್ಲಿವರೆಗಿನ ಅತಿ ಹೆಚ್ಚು ಏಕದಿನ ಏರಿಕೆಯಾಗಿದೆ.
ಭಾರತವು ಗುರುವಾರ ದಿನಕ್ಕೆ 3,14,835 ಹೊಸ ಕೊರೊನಾ ವೈರಸ್‌ ಪ್ರಕರಣಗಳನ್ನು ದಾಖಲಿಸಿದೆ, ಇದು ವಿಶ್ವದಲ್ಲೇ ಅತ್ಯಧಿಕ ಏಕದಿನ ಏರಿಕೆಯಾಗಿದೆ. ಜನವರಿಯಲ್ಲಿ ಅಮೆರಿಕದಲ್ಲಿ 2,97,430 ಪ್ರಕರಣಗಳು ವರದಿಯಾಗಿತ್ತು ಎಂದು ರಾಯಿಟರ್ಸ್ ವರದಿ ಮಾಡಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ 3,14,835 ಹೊಸ ಕೊರೊನಾ ವೈರಸ್‌ ಪ್ರಕರಣಗಳನ್ನು ದಾಖಲಿಸಿದೆ.
ಇದೇ ಸಮಯದಲ್ಲಿ ವೈರಸ್ ನಿಂದ 2,104 ಸಾವುಗಳು ಸಂಭವಿಸಿವೆ ಎಂದು ಅರೋಗ್ಯ ಇಲಾಖೆ ವರದಿ ಮಾಡಿದೆ. ದೇಶದ ಒಟ್ಟಾರೆ ಕೋವಿಡ್‌ ಪ್ರಕರಣಗಳ ಸಂಖ್ಯೆ 1,59,30,965 ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ಗರಿಷ್ಠ ಸಾವುಗಳು 568, ನಂತರ ದೆಹಲಿಯಲ್ಲಿ 249 ಸಾವುಗಳು ವರದಿಯಾಗಿವೆ. ಇಲ್ಲಿಯವರೆಗೆ, ದೇಶಾದ್ಯಂತ 1,84,657 ಕೋವಿಡ್ ರೋಗಿಗಳು ಸೋಂಕಿಗೆ ಮೃತಪಟ್ಟಿದ್ದಾರೆ.
ಹೊಸ ಕೋವಿಡ್-19 ಪ್ರಕರಣಗಳೊಂದಿಗೆ, ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 22,91,428ಕ್ಕೆ ಏರಿದೆ, ಒಟ್ಟು ಚೇತರಿಕೆಯಾದ ಪ್ರಕರಣಗಳು 1,34,54,880 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 3,14,835 ಹೊಸ ಪ್ರಕರಣಗಳು ದಾಖಲಾಗಿದ್ದು, 2,104 ಸಾವುಗಳು ಸಂಭವಿಸಿವೆ. ಮತ್ತು 1,78,841 ಜನರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು 13,23,30,644 ಜನರಿಗೆ ಲಸಿಕೆ ನೀಡಲಾಗಿದೆ.
ಭಾರತದಲ್ಲಿ ಕೋವಿಡ್ ಪ್ರಕರಣಗಳ ತೀವ್ರ ಏರಿಕೆ ಆರೋಗ್ಯ ವ್ಯವಸ್ಥೆಯನ್ನು ಮುಳುಗಿಸಿದೆ. ಕೋವಿಡ್‌-19 ಪ್ರಕರಣಗಳ ಹೆಚ್ಚಳದ ಮಧ್ಯೆ ಭಾರತದ ಅನೇಕ ಆಸ್ಪತ್ರೆಗಳು ಆಮ್ಲಜನಕದ ಪೂರೈಕೆಯ ಕೊರತೆಯನ್ನು ಎದುರಿಸುತ್ತಿವೆ.

ಪ್ರಮುಖ ಸುದ್ದಿ :-   ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ... : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement