ಕರ್ನಾಟಕದಲ್ಲಿ ಸತತ ಎರಡನೇ ದಿನವೂ 25 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ..123 ಸಾವು..!

ಬೆಂಗಳೂರು: ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 25,795 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 123 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟು ಕೊರೊನಾ ಸಾವಿನ ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಗುರುವಾರ 68 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 5450 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 15,244 ಜನರು ಸೇರಿದಂತೆ ರಾಜ್ಯದಲ್ಲಿ 25,795 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದಾಖಲಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,47,997ಕ್ಕೆ ಏರಿಕೆಯಾಗಿದೆ. ಗುರುವಾರ 5,624 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 10,37,857 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರು ನಗರದಲ್ಲಿ 1,37,813 ಸಕ್ರಿಯ ಸೋಂಕಿತರು ಸೇರಿದಂತೆ ರಾಜ್ಯದಲ್ಲಿ 1,96,236 ಸಕ್ರಿಯ ಸೋಂಕಿತರು ಇದ್ದಾರೆ.

ತುಮಕೂರು 1231, ಬಳ್ಳಾರಿ 940, ಹಾಸನ 689, ಕಲಬುರಗಿ 659, ಕೋಲಾರ 587, ಮೈಸೂರು 818, ರಾಯಚೂರು 433, ವಿಜಯಪುರ 328 ಹೊಸ ಪ್ರಕರಣಗಳು ವರದಿಯಾಗಿವೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಇಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ಘೋಚಿಸಿದ ಎನ್‌ ಐ ಎ

ಉತ್ತರ ಕನ್ನಡ 163, ಉಡುಪಿ 274, ಮಂಡ್ಯ 385, ಕೊಪ್ಪಳ 121, ಕೊಡಗು 156, ಗದಗ 73, ಹಾವೇರಿ 46, ಧಾರವಾಡ 361, ದಾವಣಗೆರೆ 157 ಹೊಸ ಪ್ರಕರಣ ದಾಖಲಾಗಿದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement