ಮಣಿಪಾಲ ಆಸ್ಪತ್ರೆಯಿಂದ ಸಿಎಂ ಬಿಎಸ್‌ವೈ ಬಿಡುಗಡೆ

posted in: ರಾಜ್ಯ | 0

ಬೆಂಗಳೂರು : ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಂತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.
ಜೊತೆಗೆ ಮೊಮ್ಮಗಳಾದ ಸೌಂದರ್ಯ ಕೂಡ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ಸೋಂಕಿನಿಂದ ಏಪ್ರಿಲ್ 16ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಂತ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮೊಮ್ಮಗಳಾದ ಸೌಂದರ್ಯ ಅವರನ್ನು ಗುರುವಾರ ಮತ್ತೆ ಕೊರೊನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದ ಕಾರಣ ಇಬ್ಬರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಮಾತನಾಡಿದಂತ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ಕೊರೋನಾ ಜಾಸ್ತಿಯಾಗಿದೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಕೊರೋನಾ ಸೋಂಕಿಗೆ ಗುರಿಯಾಗುತ್ತಿದ್ದಾರೆ. ಹೀಗಾಗಿ ಜನರು ಎಚ್ಚರಿಕೆ ವಹಿಸುವ ತುರ್ತು ಸಂದರ್ಭ ಇದಾಗಿದೆ. ರಾಜ್ಯದ ಜನ ಕೊರೊನಾ ಸೋಂಕಿನ ಬಗ್ಗೆ ಜಾಗ್ರತೆ, ಎಚ್ಚರಿಕೆ ವಹಿಸಬೇಕು. ಮನೆಯಿಂದ ಹೊರಗೆ ಬರುವುದನ್ನು ಕಡಿಮೆ ಮಾಡಬೇಕು. ಬಂದರೂ ಸಾಮಾಜಿಕ ಅಂತರ ಕಾಪಾಡಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಮನವಿ ಮಾಡಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ