400 ಕೋಟಿ ರೂ. ವೆಚ್ಚದಲ್ಲಿ 1 ಕೋಟಿ ಲಸಿಕೆ ಖರೀದಿಗೆ ಸಿಎಂ ಬಿಎಸ್‌ವೈ ಅನುಮೋದನೆ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ವ್ಯಾಕ್ಸಿನೇಷನ್ ಪ್ರಾರಂಭವಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ  400 ಕೋಟಿ ರೂ.ಗಳ ವೆಚ್ಚದಲ್ಲಿ 1 ಕೋಟಿ ಲಸಿಕೆ ಖರೀದಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮುಖ್ಯಮಂತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಹಂತದಲ್ಲಿ 400 ಕೋಟಿ ವೆಚ್ಚದಲ್ಲಿ 1 ಕೋಟಿ ಡೋಸ್ ವ್ಯಾಕ್ಸಿನ್ ಖರೀದಿಸಲು ಅನುಮೋದನೆ ನೀಡಿದ್ದಾರೆ. ಈ ವ್ಯಾಕ್ಸಿನ್ ಅನ್ನು 18 ರಿಂದ 44 ವರ್ಷದ ವರೆಗಿನ ವ್ಯಕ್ತಿಗಳಿಗೆ ನೀಡಲು ಬಳಸಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಆರ್ಭಟ ಮುಂದುವರೆಸಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 15,244 ಜನರು ಸೇರಿದಂತೆ ರಾಜ್ಯಾದ್ಯಂತ 25,795 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement