ಕೋವಿಡ್‌-19ನಿಂದ ಸಾವು: ಅಂತ್ಯಕ್ರಿಯೆಗೆ ಸರ್ಕಾರಿ ಜಮೀನು ಗುರುತಿಸಲು ಕಂದಾಯ ಸಚಿವರ ಸೂಚನೆ

ಬೆಂಗಳೂರು; ಕೋವಿಡ್‌-19ನಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸಲು ಸರ್ಕಾರಿ ಭೂಮಿ ಗುರುತಿಸುವಂತೆ ಕರ್ನಾಟಕ ಕಂದಾಯ ಸಚಿವ ಆರ್.ಅಶೋಕ ಮಂಗಳವಾರ ರಾಜ್ಯದ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ. ಈ ತಾತ್ಕಾಲಿಕ ಸೌಲಭ್ಯಗಳನ್ನು ಬೆಂಗಳೂರು ಸೇರಿದಂತೆ ನಗರಗಳ ಬಳಿ ಸ್ಥಾಪಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರಿನ ಸ್ಮಶಾನಗಳಲ್ಲಿ ದೀರ್ಘ ಸರತಿ ಸಾಲುಗಳು ಮತ್ತು ಶವಸಂಸ್ಕಾರಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಚಿವ ಆರ್ ಅಶೋಕ ಕರ್ನಾಟಕದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಇದರಲ್ಲಿ ಹಲವಾರು ನಗರಗಳಲ್ಲಿ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಮತ್ತು ಸಾವಿನ ಸಂಖ್ಯೆಯೂ ಇದೆ. ಈ ಪರಿಸ್ಥಿತಿಯಲ್ಲಿ, ಅಂತಿಮ ವಿಧಿಗಳು ಮತ್ತು ಶವಸಂಸ್ಕಾರ ಮಾಡಲು ಯಾವುದೇ ಸ್ಥಳವಿಲ್ಲ ಎಂದು ನನ್ನ ಗಮನಕ್ಕೆ ಬಂದಿದೆ. ತಕ್ಷಣ, ಎಲ್ಲಾ ಜಿಲ್ಲಾಧಿಕಾರಿಗಳು ಕೋವಿಡ್‌-19 ಸಂತ್ರಸ್ತರ ಶವ ಸಂಸ್ಕಾರಕ್ಕಾಗಿ ತಾತ್ಕಾಲಿಕವಾಗಿ ಭೂಮಿಯನ್ನು ಒದಗಿಸಲು ವ್ಯವಸ್ಥೆ ಮಾಡಬೇಕು, ಇದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ರಾಜ್ಯದ ಇತರ ಪುರಸಭೆಗಳ ಮಿತಿಯಿಂದ 1ರಿಂದ 2 ಕಿ.ಮೀ ಇರಬೇಕು” ಎಂದು ಪತ್ರದಲ್ಲಿ ಸಚಿವ ಅಶೋಕ ರಾಜ್ಯದ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಮುಹೂರ್ತ ನಿಗದಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement