ಕರ್ನಾಟಕದಲ್ಲಿ ಶುಕ್ರವಾರ 27 ಸಾವಿರದ ಹತ್ತಿರವೇ ಬಂದ ದೈನಂದಿನ ಕೊರೊನಾ ಸೋಂಕು.. 190 ಸಾವು..

ಬೆಂಗಳೂರು : ರಾಜ್ಯದಲ್ಲಿ 24 ಗಂಟೆಯಲ್ಲಿ 26,962 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 190 ಜನ ಈ ಸೋಂಕಿನಿಂದ ಮೃತಪಟ್ಟಿದ್ದಾರೆ.
ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1274959 ಕ್ಕೆ ಏರಿಕೆಯಾಗಿದೆ. ಹಾಗೂ ಸಕ್ರಿಯ ಪ್ರಕರಣಗಳು 214311 ಇವೆ. ಕೊರೊನಾ ಸಾವಿನ ಸಂಖ್ಯೆ 14,075 ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 16,662 ಜನರಿಗೆ ಸೋಂಕು ತಗುಲಿದ್ದು, 124 ಸೋಂಕಿತರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 5574 ಕ್ಕೆ ಏರಿಕೆಯಾಗಿದೆ. ಶುಕ್ರವಾರ 8697 ಸೋಂಕಿತರು ಸೇರಿದಂತೆ ಇದುವರೆಗೆ 1046554 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ