ಪ್ರಧಾನಿ ಮೋದಿ ಮುಂದೆ ಆಮ್ಲಜನಕ, ​ರೆಮ್ಡಿಸಿವಿರ್ ಬೇಡಿಕೆ ಇಟ್ಟ ಸಿಎಂ ಬಿಎಸ್‌ವೈ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದಲ್ಲಿ ಕೋವಿಡ್‌ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಕಾರಣ ಆಮ್ಲಜನಕದ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದೇ ವಿಷಯವಾಗಿ ಪ್ರಧಾನಿ ಮೋದಿ ಶುಕ್ರವಾರ ಕೋವಿಡ್ ಹೆಚ್ಚಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಕರ್ನಾಟಕಕ್ಕೆ 1471 ಟನ್‌ ಆಮ್ಲಜನಕ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ದಿನಕ್ಕೆ 1471 ‌ಟನ್ ಆಕ್ಸಿಜನ್ ಅಗತ್ಯವಿದ್ದು, ಇಷ್ಟು ಪ್ರಮಾಣದ ಆಕ್ಸಿಜನ್ ಒದಗಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದರು.
ರಾಜ್ಯದಲ್ಲಿ ಆಮ್ಲಜನಕದ ಬಳಕೆ ದಿನೇ ದಿನೇ ಹೆಚ್ಚುತ್ತಿದೆ. ಗುರುವಾರ ರಾಜ್ಯದಲ್ಲಿ 500 ಟನ್ ಆಕ್ಸಿಜನ್ ಬಳಕೆಯಾಗಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದೆ. ಆಮ್ಲಜನಕದ ಕೊರತೆಯಿಂದ ಹಲವು ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗಲಿದೆ ಎಂದು ವಾಸ್ತವ ಸ್ಥಿತಿ ಬಗ್ಗೆ ಯಡಿಯೂರಪ್ಪ ವಿವರಿಸಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯಕ್ಕೆ ಏಪ್ರಿಲ್ 25 ರಿಂದ 1142 ಟನ್ ಆಮ್ಲಜನಕ ಅಗತ್ಯವಿದೆ. ಹಾಗೂ ಏಪ್ರಿಲ್ 30ರ ನಂತರ 1471 ಟನ್ ಆಮ್ಲಜನಕದ ಅಗತ್ಯವಿದೆ. ಹೀಗಾಗಿ ಆಮ್ಲಜನಕ ಕೊರತೆ ನೀಗಿಸಲು ರಾಜ್ಯಕ್ಕೆ ತಕ್ಷಣವೇ 1471 ಟನ್ ಆಮ್ಲಜನಕ ಪೂರೈಕೆ ಮಾಡಬೇಕು. ರಾಜ್ಯದಲ್ಲಿ ರೆಮ್ಡಿಸಿವಿರ್ ಕೊರತೆಯಾಗದಂತೆ ಎಚ್ಚರ ವಹಿಸಲಾಗಿದೆ. ಮುಂದಿನ 10 ದಿನಗಳಲ್ಲಿ ರಾಜ್ಯಕ್ಕೆ 2 ಲಕ್ಷ ಡೋಸ್ ಗಳಷ್ಟು ರೆಮ್ಡಿಸಿವಿರ ಡೋಸ್‌ ಒದಗಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ