ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಲ್ಲಿ ಉಳಿಸಿಕೊಳ್ಳಿ: ಡಿಸಿಎಂ

ಬೆಂಗಳೂರು: ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ ಉನ್ನತ ಶಿಕ್ಷಣ ವಿಭಾಗದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿದ್ದರೆ ಅಂಥವರನ್ನು ಅಲ್ಲಿಂದ ಹೊರ ಕಳುಹಿಸುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಕುರಿತು ಗುರುವಾರ ಮಾತನಾಡಿರುವ ಅವರು, “ಹಾಸ್ಟೆಲ್‌ಗಳಲ್ಲಿ ಇದ್ದುಕೊಂಡು ಎಂಜಿನಿಯರಿಂಗ್, ಡಿಪ್ಲೊಮಾ, ಪಾಲಿಟೆಕ್ನಿಕ್, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಬಾರದು. ಪರೀಕ್ಷೆ ಮುಗಿಯುವ ತನಕ ಅವರಿಗೆ ಊಟ ವಸತಿ ಸೇರಿದಂತೆ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಮುಂದುವರಿಸಬೇಕು. ಕೊರೊನಾ ಬಗ್ಗೆ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

3.2 / 5. 6

ಶೇರ್ ಮಾಡಿ :
ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement