ಉತ್ತರಾಖಂಡದ ಜೋಶಿಮಠದ ಬಳಿ ಮತ್ತೆ ಹಿಮಸ್ಫೋಟ

ಡೆಹ್ರಾಡೂನ್: ಈಚೆಗಷ್ಟೆ ಹಿಮಸ್ಫೋಟ ಸಂಭವಿಸಿ ಅನಾಹುತಕ್ಕೆ ತುತ್ತಾಗಿದ್ದ ಉತ್ತರಾಖಂಡದಲ್ಲಿ ಶುಕ್ರವಾರ ಮತ್ತೆ ಹಿಮಸ್ಫೋಟ ಸಂಭವಿಸಿದ ಬಗ್ಗೆ ವರದಿಯಾಗಿದೆ.
ಉತ್ತರಾಖಂಡದ ಭಾರತ-ಚೀನಾ ಗಡಿಯಲ್ಲಿರುವ ಜೋಶಿಮಠ್ ಬಳಿ  ಹಿಮಸ್ಫೋಟ ಸಂಭವಿಸಿರುವುದಾಗಿ ಗಡಿ ಕಾರ್ಯಪಡೆಯ ಕರ್ನಲ್ ಮನೀಶ್ ಕಪಿಲ್ ಮಾಹಿತಿ ನೀಡಿದ್ದಾರೆ. ವರದಿಯ ಪ್ರಕಾರ, ಹಿಮಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಜನವಸತಿ ಇರಲಿಲ್ಲ. ಐಟಿಬಿಪಿ ಹಾಗೂ ಬಿಆರ್‌ಒ ಸಿಬ್ಬಂದಿ ಮಾತ್ರ ಆ ಪ್ರದೇಶದಲ್ಲಿದ್ದರು. ಘಟನೆ ನಡೆದ ಸ್ಥಳಕ್ಕೆ ಗಡಿ ಪಡೆ ಸಿಬ್ಬಂದಿ ತೆರಳಲಿರುವುದಾಗಿ ತಿಳಿದುಬಂದಿದೆ.
ಇದೇ ಫೆಬ್ರವರಿ 7ರಂದು ಉತ್ತರಾಖಂಡದ ಚಮೋಲಿ ಜಿಲ್ಲೆಯ ತಪೋವನ ಪ್ರದೇಶದಲ್ಲಿ ಭಾರೀ ಹಿಮಸ್ಫೋಟ ಸಂಭವಿಸಿತ್ತು. ದುರ್ಘಟನೆಯಲ್ಲಿ 206 ಮಂದಿ ನಾಪತ್ತೆಯಾಗಿದ್ದು, ಅದರಲ್ಲಿ 70 ಮಂದಿಯ ಮೃತದೇಹಗಳು ಪತ್ತೆಯಾಗಿದ್ದವು. 29 ಜನರಿಗೆ ಸಂಬಂಧಿಸಿದ ಅವಶೇಷಗಳು ಪತ್ತೆಯಾಗಿದ್ದು, ಉಳಿದಂತೆ 136 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿದು ಬಂದಿತ್ತು.
ಇದೀಗ ಎರಡೂವರೆ ತಿಂಗಳ ನಂತರ ಶುಕ್ರವಾರ ಸಂಜೆ ಮತ್ತೆ ಹಿಮಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.ಈ ಕುರಿತು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement