ಜನ್ಮದಿನದಂದು ಪ್ಲಾಸ್ಮಾ ದಾನಕ್ಕೆ ಮುಂದಾದ ತೆಂಡೂಲ್ಕರ್‌

ಮುಂಬೈ: ಕೋವಿಡ್​ ಸೋಂಕಿನಿಂದ ಗುಣಮುಖರಾಗಿರುವ ಕ್ರಿಕೆಟ್​ ದಂತಕತೆ ಸಚಿನ್​ ತೆಂಡೂಲ್ಕರ್​ ತಮ್ಮ ಜನ್ಮದಿನದಂದೇ ಮಹ್ವದ ನಿರ್ಧಾರ ಕೈಗೊಂಡಿದ್ದಾರೆ. ಕೋವಿಡ್​ನಿಂದ ಗುಣಮುಖರಾಗಿರುವ ಅವರು ಈಗ ಪ್ಲಾಸ್ಮಾ ದಾನ ನೀಡಲು ನಿರ್ಧರಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ತಿಳಿಸಿರುವ ಅವರು, ಪ್ಲಾಸ್ಮಾದಾನಕ್ಕೆ ತಾವು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಕಳೆದ ವರ್ಷ ನಾನು ಪ್ಮಾಸ್ಮಾ ಕೇಂದ್ರ ಉದ್ಘಾಟಿಸಿದ್ದೆ. ಈ ವೇಳೆ ವೈದ್ಯರು ಸರಿಯಾದ ಸಮಯದಲ್ಲಿ ಪ್ಲಾಸ್ಮಾ ದಾನ ಮಾಡಿದರೆ, ಇದರಿಂದ ಇತರೆ ರೋಗಿಗಳು ಚೇತರಿಸಿಕೊಳ್ಳಬಹುದು ಎಂದಿದ್ದರು. ಅದರಂತೆ ಈಗ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಕೋವಿಡ್​ನಿಂದ ನಾನು ಗುಣಮುಖನಾಗಿದ್ದೇನೆ. ನಾನು ದಾನಕ್ಕೆ ಅರ್ಹವಾಗುತ್ತಿದ್ದಂತೆ ವೈದ್ಯರ ಸಲಹೆಯಂತೆ ಅದನ್ನು ದಾನ ಮಾಡುತ್ತೇನೆ. ಈ ಕುರಿತು ಈಗಾಗಲೇ ವೈದ್ಯರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.
ಕ್ರಿಕೆಟ್​ ದಿಗ್ಗಜ ಸಚಿನ್​, ಸೋಂಕಿನಿಂದ ಗುಣಮುಖರಾದವರಿಗೆ ಪ್ಲಾಸ್ಮಾ ದಾನಮಾಡುವಂತೆ ಮನವಿ ಮಾಡಿದ್ದಾರೆ. ಈ ಮೂಲಕ ಬೇರೆಯವರ ಸಹಾಯಕ್ಕೆ ನೆರವಾಗುವಂತೆ ಕೋರಿದ್ದಾರೆ. ಸೋಂಕಿನಿಂದ ಗುಣಮುಖರಾದವರು ನಿಮ್ಮ ವೈದ್ಯರ ಸಲಹೆಯಂತೆ ರಕ್ತದಾನ ಮಾಡಿ. ಈ ಮೂಲಕ ಅನೇಕ ಸಮಸ್ಯೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದ್ದಾರೆ.
ಕೋವಿಡ್​ ಸೋಂಕಿನಿಂದ ಗುಣಮುಖರಾದ ವ್ಯಕ್ತಿಯ ಪ್ಲಾಸ್ಮಾವನ್ನು ಸೋಂಕಿತ ವ್ಯಕ್ತಿ ಚಿಕಿತ್ಸೆಗೆ ಬಳಸಲಾಗುತ್ತದೆ. ಇದರಿಂದ ಸೋಂಕಿತರು ಶೀಘ್ರ ಗುಣಮುಖರಾಗಲು ಸಹಾಯವಾಗುತ್ತದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ