ಕರ್ನಾಟಕದಲ್ಲಿ 30 ಸಾವಿರದ ಸಮೀಪಕ್ಕೆ ಬಂದ ದೈನಂದಿನ ಕೊರೊನಾ ಸೋಂಕು..208 ಸಾವು..!

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 29,438 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿರುವುದು ದಾಖಲಾಗಿದೆ. ಇದೇ ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 208 ಜನರು ಮೃತಪಟ್ಟಿದ್ದಾರೆ.
ಕರ್ನಾಟಕದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,34,483ಕ್ಕೆ ಏರಿಕೆಯಾಗಿದೆ.
ಈ ಕುರಿತು ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿಯೇ 17,342 ಜನರಿಗೆ ಸೋಂಕು ದೃಢಪಟ್ಟಿದ್ದು ರಾಜ್ಯಾಧ್ಯಂತ 29,438 ಜನರಿಗೆ ಸೋಂಕು ತಗುಲಿದ್ದು ದಾಖಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,04,397ಕ್ಕೆ ಏರಿಕೆಯಾಗಿದೆ.
ಶನಿವಾರ 9058 ಸೋಂಕಿತರು ಸೇರಿದಂತೆ ಇದುವರೆಗೆ 10,55,612 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರು ನಗರದಲ್ಲಿ 1,62,171 ಸಕ್ರಿಯ ಸೋಂಕಿತರು ಸೇರಿದಂತೆ ರಾಜ್ಯಾದ್ಯಂತ 2,34,483 ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 149 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯಾದ್ಯಂತ 208 ಸೋಂಕಿತರುಮೃತಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 14,283ಕ್ಕೆ

ಪ್ರಮುಖ ಸುದ್ದಿ :-   ಗುಂಡ್ಲುಪೇಟೆ | ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಮಂಗಗಳ ಶವಗಳು ಪತ್ತೆ, ವಿಷಪ್ರಾಶನದ ಶಂಕೆ

ಏರಿಕೆಯಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement