ಕರ್ನಾಟಕದಲ್ಲಿ 35 ಸಾವಿರದ ಸಮೀಪ ದೈನಂದಿನ ಪ್ರಕರಣ ದಾಖಲು… ಬೆಂಗಳೂರಲ್ಲೇ 20 ಸಾವಿರ ದಾಟಿದ ಸೋಂಕು..!

posted in: ರಾಜ್ಯ | 0

ಬೆಂಗಳೂರು:ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 34,804 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಭಾನುವಾರ 143 ಮಂದಿ ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 77 ಸೋಂಕಿತರು ಸೇರಿದಂತೆ, ರಾಜ್ಯಾದ್ಯಂತ 143 ಸೋಂಕಿತರು ಚಿಕಿತ್ಸೆ ಮೃತಪಟ್ಟಿದ್ದಾರೆ. ಮೃತಪಟ್ಟವರ ಸಂಖ್ಯೆ 14,426 ಕ್ಕೆ ಏರಿಕೆಯಾಗಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 20,733 ಜನರಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 13,39,201 ಕ್ಕೆ ಏರಿಕೆಯಾಗಿದೆ.
ಭಾನುವಾರ 6982 ಸೋಂಕಿತರು ಸೇರಿದಂತೆ ಇದುವರೆಗೆ 10,62,594 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಹೀಗಾಗಿ ಬೆಂಗಳೂರು ನಗರದಲ್ಲಿ 1,80,542 ಸಕ್ರೀಯ ಸೋಂಕಿತರು ಸೇರಿದಂತೆ ರಾಜ್ಯಾದ್ಯಂತ 2,62,162 ಸಕ್ರಿಯ ಸೋಂಕಿತರು ತಿಳಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ