ಭಾರತದಲ್ಲಿ ಮೂರೂವರೆ ಲಕ್ಷ ಸಮೀಪ ಬಂದ ದೈನಂದಿನ ಕೊರೊನಾ ಸೋಂಕು..ಸಾವಿನ ಸಂಖ್ಯೆಯಲ್ಲೂ ಏರಿಕೆ..!

ನವ ದೆಹಲಿ: ದೇಶದಲ್ಲಿ ಕೊರೊನಾ ಮತ್ತಷ್ಟು ಭೀಕರತೆ ತೋರುತ್ತಿದ್ದು, ಸತತ 4ನೇ ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಕಳೆದ 24 ತಾಸಿನಲ್ಲಿ ಭಾನುವಾರ 3,49,691 ಪ್ರಕರಣಗಳು ದಾಖಲಾಗಿದೆ.ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 2,767 ಮಂದಿ ಮೃತಪಟ್ಟಿದ್ದಾರೆ.
ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,69,60,172ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸಾವಿನ ಸಂಖ್ಯೆ 1,92,311ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 26,82,751ಕ್ಕೆ ಜಿಗಿದಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 2,17,113 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,40,85,110ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ ದಿನ 17,19,588 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 27,79,18,810 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯ ವರೆಗೂ ಒಟ್ಟಾರೆ 14,09,16,417 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement