ಮಹತ್ವದ ಆದೇಶ.. ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಈಗ ಐದು ಜನರಿಗೆ ಮಾತ್ರ ಅವಕಾಶ

posted in: ರಾಜ್ಯ | 0

ಬೆಂಗಳೂರು : ಕರ್ನಾಟದಕಲ್ಲಿ ಕೊರೊನಾ ಉಲ್ಬಣದ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ ಇದೀಗ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಐದು ಮಂದಿಗೆ ಮಾತ್ರ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.
ಈ ಮೊದಲು ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಭಾಗವಹಿಸಲು ಅವಕಾಶ ನೀಡಿತ್ತು. ಸದ್ಯ, ಇದನ್ನು ಮತ್ತಷ್ಟು ಕಡಿಮೆ ಮಾಡಿ ಐದು ಜನರಿಗೆ ಮಾತ್ರ ಅವಕಾಶ ನೀಡಿದೆ. ಮಾರ್ಗಸೂಚಿ ಪಾಲಿಸಿ ಐದು ಮಂದಿ ಮಾತ್ರ ಭಾಗಿಯಾಗಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥಪ್ರಸಾದ್ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಭಾನುವಾರ ಕೊರೋನಾ ಮಹಾಸ್ಫೋಟವೇ ಉಂಟಾಗಿದ್ದು, ಇನ್ನೂ, ಹೊಸದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯಾದ್ಯಂತ 34,804 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿಯೇ ಬೆಂಗಳೂರು ನಗರದಲ್ಲಿ 20,733 ಪ್ರಕರಣಗಳು ದಾಖಲಾಗಿವೆ.
ಕಳೆದ 24 ಗಂಟೆಯಲ್ಲಿ 43 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆರ. ಹೀಗಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 14426 ಕ್ಕೆ ಏರಿಕೆಯಾಗಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟಿನಿಟ್ಟಾದ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಮುಂದಾಗಿದ್ದು ಈ ಆದೇಶ ಜಾರಿ ಮಾಡಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

4.5 / 5. ಒಟ್ಟು ವೋಟುಗಳು 4

ನಿಮ್ಮ ಕಾಮೆಂಟ್ ಬರೆಯಿರಿ