ಮಹತ್ವದ ಆದೇಶ…ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದಕ್ಕೆ

ಬೆಂಗಳೂರು : ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಏಪ್ರಿಲ್ 28ರಿಂದ ಪ್ರಾರಂಭವಾಗಬೇಕಿದ್ದಂತ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ಕೈಗೊಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿಗಳ ಹಂತದಲ್ಲಿ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ‌ ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಕೂಡ, 2020-21ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ ಮಾಡಿ ಸುತ್ತೋಲೆ ಹೊರಡಿಸಿದೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement