ರೆಮ್ಡಿಸಿವಿರ್‌ : ಕರ್ನಾಟಕದ ಪಾಲು 1.22 ಲಕ್ಷ ವಯಲ್‌

posted in: ರಾಜ್ಯ | 0

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಬೇಡಿಕೆಗೆ ಅನುಗುಣವಾಗಿ ಶನಿವಾರ ರೆಡಿಸಿವಿರ್‌ ಮರು ಹಂಚಿಕೆ ಮಾಡಿದ್ದೇವೆ. ಇದರಲ್ಲಿ ಕರ್ನಾಟಕದ ಪಾಲು 1.22 ಲಕ್ಷ ವಯಲ್‌ಗ‌ಳಿಗೆ ಏರಿಕೆಯಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ನಾನು ನಿರ್ವಹಿಸುವ ಔಷಧ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಉನ್ನತಾಧಿಕಾರದ ಸಮಿತಿಯು ಈ ನಿರ್ಣಯ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯಕ್ಕೆ ನಾವು ಸಂಪೂರ್ಣ ಸಹಕಾರ, ನೆರವು ನೀಡುತ್ತೇವೆ ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ