ನವ ದೆಹಲಿ; ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನ್ಯಾ. ಮೋಹನ್ ಎಂ. ಶಾಂತನಗೌಡರ್ ಶನಿವಾರ ರಾತ್ರಿ ನಿಧನ ಹೊಂದಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ ಮೋಹನ್ ಮಲ್ಲಿಕಾರ್ಜುನಗೌಡ ಶಾಂತನಗೌಡರ್ (61) ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಡಲಾಗಿತ್ತು. ಶನಿವಾರ ರಾತ್ರಿ ಅವರು ನಿಧನರಾಗಿದ್ದಾರೆ.
ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದವರು. ಧಾರವಾಡ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲದಿಂದ ಕಾನೂನು ಪದವಿ ಪಡೆದಿದ್ದರು.
2003ರಲ್ಲಿ ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2004ರಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಆರಂಭಿಸಿದ್ದರು. 2016ರಿಂದ ಒಂದು ವರ್ಷ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. 2017ರಲ್ಲಿ ನ್ಯಾ. ಮೋಹನ್ ಎಂ. ಶಾಂತನಗೌಡರ್ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಇವರ ಸೇವಾ ಅವಧಿ 2023ರ ಮೇ 4ರ ತನಕ ಇತ್ತು.
ನಿಮ್ಮ ಕಾಮೆಂಟ್ ಬರೆಯಿರಿ