ಕರ್ನಾಟಕದಲ್ಲಿ ಸೋಮವಾರ 201 ಕೊರೊನಾ ಸಾವು, 30 ಸಾವಿರದ ಒಳಗೆ ದೈನಂದಿನ ಸೋಂಕು

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 201 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14,627ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 29,744 ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 13,68,945ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಸೋಮವಾರ 16,545 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,70,201ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ 105 ಮಂದಿ ಮೃತಪಟ್ಟಿದ್ದಾರೆ .
ರಾಜ್ಯದಲ್ಲಿ 10,663 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,73,257ಕ್ಕೆ ಏರಿಕೆಯಾಗಿದೆ. 2,81,042 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 1,815 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ