ಜಿಪಂ, ತಾಪಂ, ಕಸಾಪ ಸೇರಿದಂತೆ ಎಲ್ಲ ಚುನಾವಣೆ ಮುಂದೂಡಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಚಿ ಸಂಪುಟದ ಸಭೆಯಲ್ಲಿ ರಾಜ್ಯದಲ್ಲಿ ನಡೆಯುವ ಎಲ್ಲ ಚುನಾವಣೆಗಳನ್ನು ಮುಂದೂಡುವಂತೆ ಶಿಫರಾಸು ಮಾಡಲು ತೀರ್ಮಾ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರು ತಿಂಗಳುಗಳ ಕಾಲ ಎಲ್ಲ ಚುನಾವಣೆಯನ್ನು ಮುಂದೂಡಿಕೆ ಮಾಡಲು ನಿರ್ಧರಿಸಲಾಗಿದ್ದು, ಈ ಸಂಬಂಧ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ತಿಳಿಸಿದರು.
ನಡೆಯಬೇಕಿದ್ದ ಬೃಹನ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಜಿಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ, ನಗರಸಬೆ, ಪುರಸಭೆ ಚುನಾವಣೆಗಳು, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಎಲ್ಲ ಚುನಾವಣೆಗಳನ್ನು ಆರು ತಿಂಗಳುಗಳ ಕಾಲ ಮುಂದೂಡಿಕೆಯಾಗಲಿದೆ. ಮೇ ತಿಂಗಳ ಅಂತ್ಯದಲ್ಲಿ ಜಿಪಂ ಹಾಗೂ ತಾಪಂ ಅಧಿಕಾರವಧಿ ಮುಗಿಯಲಿದೆ, ಇದಕ್ಕೆಚುನಾವಣೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿತ್ತು. ಚುನಾವಣೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿತ್ತು. ಹಾಗೆಯೇ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮೇ 9ರಂದು ನಡೆಯಲು ದಿನಾಂಕ ನಿಗದಿಯಾಗಿತ್ತು. ಆದರೆ, ಇದೀಗ ಆರು ತಿಂಗಳುಗಳ ಕಾಲ ಎಲ್ಲ ಚುನಾವಣೆ ಮುಂದೂಡಲು ಶಿಫಾರಸು ಮಾಡಲು ನಿರ್ಧರಿಸಲಾಗಿದೆ.

ಪ್ರಮುಖ ಸುದ್ದಿ :-   ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನಕ್ಕೆ ನಿರ್ಬಂಧ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement