ಮಹತ್ವದ ಸುದ್ದಿ… ಕೋವಿಡ್ ನಿರ್ವಹಣೆಗಾಗಿ ರಾಜ್ಯ ಸರ್ಕಾರಿ ನೌಕರರ ‘1 ತಿಂಗಳ ವೇತನ’ ಕಡಿತಕ್ಕೆ ಕ್ಯಾಬಿನೆಟ್‌ನಲ್ಲಿ ನಿರ್ಧಾರ..!?

ಬೆಂಗಳೂರು : ಕೊರೊನಾ ಸೋಂಕಿನ 2ನೇ ಅಲೆಯ ಅಬ್ಬರ ರಾಜ್ಯದಲ್ಲಿ ಅಬ್ಬರಿಸಿದೆ. ಈ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ನಾಳೆಯಿಂದ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಇದರ ಬೆನ್ನಿಗೇ ಆರೋಗ್ಯ ತುರ್ತು ಕ್ರಮಗಳಿಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತಗೊಳಿಸುವ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

ಆದರೆ ಅಧಿಕೃತ ಆದೇಶ ಹೊರಬಿದ್ದಿಲ್ಲ.
ಇಂದು (ಸೋಮವಾರ) ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿನ ಕೊರೊನಾ ನಿಯಂತ್ರಣ ಕ್ರಮ ಕುರಿತು ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ಬಹುತೇಕ ಎಲ್ಲರೂ ತಮ್ಮ ಒಂದು ತಿಂಗಳ ಸಂಬಳ ನೀಡಲು ಒಪ್ಪಿದ್ದಾರೆ ಎನ್ನಲಾಗಿದೆ. ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಆರೋಗ್ಯ ತುರ್ತು ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದ್ದು. ಪೊಲೀಸ್ ಮತ್ತು ಆರೋಗ್ಯ ಸಿಬ್ಬಂದಿ ವೇತನ ಹೊರತು ಪಡಿಸಿ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತಕ್ಕೆ ಮುಂದಾಗಿದೆ.

ಪೊಲೀಸ್ ಮತ್ತು ಆರೋಗ್ಯ ಸಿಬ್ಬಂದಿ ಹೊರತುಪಡಿಸಿ ಸರ್ಕಾರಿ ಸಿಬ್ಬಂದಿಯ ವೇತನ ಕಡಿತ ನಿರ್ಧಾರಕ್ಕೆ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ. ಸಚಿವರು, ಶಾಸಕರು, ಪರಿಷತ್​ ಸದಸ್ಯರು, ಸರ್ಕಾರಿ ನೌಕರರ​​ ಒಂದು ತಿಂಗಳ ವೇತನ ಕಡಿತದಿಂದ 5000 ಕೋಟಿಗೂ ಹೆಚ್ಚು ಹಣ ಸರ್ಕಾರಕ್ಕೆ ಉಳಿಯಲಿದೆ. ಈ ಹಣವನ್ನು ಕೋವಿಡ್​ ನಿರ್ವಹಣೆಗೆ ಬಳಸಲು ರಾಜ್ಯ ಸರ್ಕಾರ ಮುಂದಾಗಿದೆ. ಸಂಪುಟ ಸಭೆಯಲ್ಲಿ ಬಹುತೇಕ ಸಚಿವರು ತಮ್ಮ 1 ತಿಂಗಳ ವೇತನ ಕಡಿತಕ್ಕೆ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಕೋವಿಡ್​ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವ ಆರೋಗ್ಯ ಇಲಾಖೆ, ಪೊಲೀಸ್​ ಇಲಾಖೆಯನ್ನು ವೇತನ ಕಡಿತದಿಂದ ಹೊರಗಿಡುವ ಬಗ್ಗೆ ಸರ್ವಾನುಮತದಿಂದ ನಿರ್ಧರಿಸಲಾಗಿದೆ. ಆದರೆ ಇತರೆ ಸರ್ಕಾರಿ ಇಲಾಖೆಗಳ ನೌಕರರ ವೇತನ ಕಡಿತದ ನಿರ್ಧಾರದಿಂದ ಅಸಮಾಧಾನ ಭುಗಿಲೇಳುವ ಸಾಧ್ಯತೆಗಳಿವೆ ಎಂಬ ಕಾರಣಕ್ಕೆ ಸಾಧಕ-ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿ ಸದ್ಯದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಿದ್ದಾರೆ.

4.7 / 5. 6

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement