18ರಿಂದ 45 ವರ್ಷದವರಿಗೆ ಕೊರೋನಾ ಲಸಿಕೆ ಉಚಿತ; ಸಿಎಂ ಬಿಎಸ್​ವೈ ಘೋಷಣೆ

ಬೆಂಗಳೂರು: ಮೇ 1ರಿಂದ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಉಚಿತ ಕೋವಿಡ್‌ ಲಸಿಕೆ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಸೋಮವಾರ ನಡೆದ ರಾಜ್ಯ ಸಂಪುಟ ಸಭೆ ನಡೆದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆಯಿಂದ ಹದಿನಾಲ್ಕು ದಿನಗಳ ಕಠಿಣ ಕರ್ಫ್ಯೂ ಜಾರಿ ವಿಷಯವನ್ನು ಪ್ರಕಟಿಸಿದ ಬೆನ್ನಲ್ಲೇ ಎಲ್ಲರಿಗೂ ಉಚಿತ ಕೊರೋನಾ ಲಸಿಕೆ ಕೂಡ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಸಿದರು.
ರಾಜ್ಯದಲ್ಲೂ ಉಚಿತ ಲಸಿಕೆ ಕೊಡುವಂತೆ ಒತ್ತಾಯ ಪ್ರತಿಪಕ್ಷಗಳು ಒತ್ತಾಯ ಮಾಡಿದ್ದವು. ಈಗಾಗಲೇ ಮಹಾರಾಷ್ಟ್ರ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ದೆಹಲಿ, ಛತ್ತೀಸ್‌ಗಡ್, ಬಿಹಾರ, ಗೋವಾ, ಕೇರಳ, ಜಾರ್ಖಂಡ್, ಉತ್ತರ ಪ್ರದೇಶ, ಅಸ್ಸಾಂ, ಸಿಕ್ಕಿಂ, ಪಶ್ಚಿಮ ಬಂಗಾಳ, ತಮಿಳುನಾಡು ಆಂಧ್ರಪ್ರದೇಶ, ತೆಲಂಗಾಣ ಮತ್ತು ಹರಿಯಾಣ ರಾಜ್ಯಗಳು 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಉಚಿತ ಕೋವಿಡ್‌ ಲಸಿಕೆ ನೀಡುವುದಾಗಿ ಪ್ರಕಟಿಸಿವೆ.
ಈಗಾಗಲೇ ಕೋವಿಡ್ ನಿರ್ವಹಣೆಯಲ್ಲಿ‌ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಪಕ್ಷಗಳೂ ಮುಗಿಬಿದ್ದಿದ್ದವು. ಆಕ್ಸಿಜನ್, ರೆಮ್ಡಿಸಿವಿರ್ ಇಂಜಕ್ಷನ್, ಬೆಡ್, ಐಸಿಯು, ಆ್ಯಂಬುಲೆನ್ಸ್ ಕೊರತೆ ಇವುಗಳ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು.
ರಾಜ್ಯದ ಎಲ್ಲ ಜನರಿಗೂ ಉಚಿತವಾಗಿ ಲಸಿಕೆ ನೀಡುವ ತೀರ್ಮಾನ ತೆಗೆದುಕೊಳ್ಳಲಾಯಿತು. ಸಚಿವ ಸಂಪುಟ ಸಭೆ ಮುಕ್ತಾಯಗೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಬಹುದಾಗಿದ್ದು, 18ರಿಂದ 45 ವರ್ಷದವರೆಗಿನ ಎಲ್ಲ ಜನರಿಗೂ ಉಚಿತ ಲಸಿಕೆ ಮುಂದುವರಿಯಲಿದೆ ಎಂದು ತಿಳಿಸಿದರು.
ಇದಲ್ಲದೆ ರಾಜ್ಯಕ್ಕೆ 800 ಮೆಟ್ರಿಕ್‌ ಟನ್‌ ಆಮ್ಲಜನಕ ನೀಡಲು ಕೇಂದ್ರ ಸರ್ಕಾರ ಒಪ್ಪಿದೆ. ಈಗಾಲೇ ಪೂರೈಕೆ ಪ್ರಕ್ರಿಯೆಯೂ ಆರಂಭವಾಗಿದೆ. ಹೀಗಾಗಿ ರಾಜ್ಯಕ್ಕೆ ಆಮ್ಲಜನಕದ ಕೊರತೆಯಾಗುವುದಿಲ್ಲ ಎಂದು ಹೇಳಿದರು. ಇದಲ್ಲದೆ 1.22 ಲಕ್ಷ ವಯಲ್‌ ರೆಮ್ಡಿಸಿವಿರ್‌ ಕೊಡಲು ಸಹ ಕೇಂದ್ರ ಸರ್ಕಾರ ಒಪ್ಪಿದೆ ಎಂದು ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವಿಪರೀತವಾಗಿದ್ದು, ಭಾನುವಾರ ಸುಮಾರು 35 ಸಾವಿರ ಕೊರೋನಾ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಹದಿನಾಲ್ಕು ದಿನಗಳ ಕಾಲ ಸೆಮಿ ಲಾಕ್‌ಡೌನ್‌ ಜಾರಿ ಮಾಡಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement