ಕಾಲ್ ಸೆಂಟರ್​ನಿಂದ ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ: 1,100 ಸಿಬ್ಬಂದಿ ನೇಮಕ

ಬೆಂಗಳೂರು: ಮನೆ ಆರೈಕೆಯಲ್ಲಿರುವ ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ ನೀಡಲು ಕಾಲ್ ಸೆಂಟರ್ ನಲ್ಲಿ ಒಟ್ಟು 1,100 ಮಂದಿಯನ್ನು ನಿಯೋಜಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದರು.
ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾಲ್ ಸೆಂಟರ್ ನಲ್ಲಿ 400 ಸಿಬ್ಬಂದಿ ಇದ್ದಾರೆ. ಮನೆ ಆರೈಕೆಯಲ್ಲಿ ಇರುವವರಿಗೆ ಕರೆ ಮಾಡಿ ಮಾರ್ಗದರ್ಶನ ನೀಡಲು 11 ಕೋಟಿ ರೂ. ವೆಚ್ಚದಲ್ಲಿ 6 ತಿಂಗಳಿಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ, ಹೊಸ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಿಬ್ಬಂದಿ ಬೇರೆ ಬೇರೆ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಜೊತೆಗೆ 20 ಕೋಟಿ ರೂ. ವೆಚ್ಚದಲ್ಲಿ ಟೆಲಿ ಮೆಡಿಸಿನ್, ವೈದ್ಯಕೀಯ ಸಲಹೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ 2-3 ಸಾವಿರ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆಯನ್ನು 15-20 ದಿನಗಳಲ್ಲಿ ನಿರ್ಮಿಸಲಾಗುವುದು. ವಿಕ್ಟೋರಿಯಾ, ಬೌರಿಂಗ್, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಇದನ್ನು ನಿರ್ಮಿಸಲಾಗುವುದು. ಒಂದು ಆಸ್ಪತ್ರೆಯಲ್ಲಿ 200-250 ಹಾಸಿಗೆಗಳಿದ್ದು, ಶೇ.20 ರಷ್ಟು ಐಸಿಯು ವೆಂಟಿಲೇಟರ್, ಶೇ.60 ರಷ್ಟು ಆಕ್ಸಿಜನ್, ಶೇ.20 ರಷ್ಟು ಹೈ ಫ್ಲೋ ಆಕ್ಸಿಜನ್ ಇರಲಿದೆ. ಎಲ್ಲ ಜಿಲ್ಲೆಗಳಲ್ಲೂ ಈ ವ್ಯವಸ್ಥೆಯಾಗಲಿದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement