ಕೋವಿಡ್‌ ಪರಿಸ್ಥಿತಿ: ಅಮೆರಿಕ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ

ನವ ದೆಹಲಿ: ಭಾರತ ಎದುರಿಸುತ್ತಿರುವ ಕೊರೊನಾವೈರಸ್ ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಬೆಂಬಲ ನೀಡುವುದಾಗಿ ತಿಳಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಜೊತೆಗೆ ಸೋಮವಾರ ಫೋನಿನಲ್ಲಿ ಮಾತನಾಡಿದ್ದಾರೆ.
ಕೊವಿಡ್-19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಯುರೋಪಿಯನ್ ಒಕ್ಕೂಟ, ಜರ್ಮನಿ, ಫ್ರಾನ್ಸ್ ಸೇರಿದಂತೆ ರಾಷ್ಟ್ರಗಳು ಸಹಾಯಹಸ್ತ ನೀಡುವುದಕ್ಕೆ ಮುಂದೆ ಬಂದಿವೆ. ಅಮೆರಿಕಾ ಮತ್ತು ಭಾರತದಲ್ಲಿ ಕೊರೊನಾವೈರಸ್ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದು, ನೆರವು ನೀಡಲು ಮುಂದಾಗಿರುವ ಜೋ ಬಿಡೆನ್ ಅವರಿಗೆ ಧನ್ಯವಾದ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಸೋಮವಾರ ಪೋಟಸ್ ಹಾಗೂ ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಅವರ ಜೊತೆಗೆ ನಡೆಸಿದ ಸಂಭಾಷಣೆ ಫಲಪ್ರದವಾಗಿದೆ. ಉಭಯ ರಾಷ್ಟ್ರಗಳಲ್ಲಿನ ಕೊವಿಡ್-19 ಪರಿಸ್ಥಿತಿ ಬಗ್ಗೆ ನಾವು ವಿವರವಾಗಿ ಚರ್ಚಿಸಿದ್ದೇವೆ. ಅಮೆರಿಕ ಭಾರತಕ್ಕೆ ಬೆಂಬಲ ನೀಡುತ್ತಿದ್ದು, ಅದಕ್ಕಾಗಿ ನಾನು ಅಧ್ಯಕ್ಷ ಬಿಡನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಕೊವಿಶೀಲ್ಡ್ ಲಸಿಕೆಯ ಕಚ್ಚಾವಸ್ತು ರವಾನೆ:
ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಲಸಿಕೆಯ ಕಚ್ಚಾವಸ್ತುಗಳನ್ನು ಭಾರತಕ್ಕೆ ಕಳುಹಿಸುವುದಾಗಿ ಅಮೆರಿಕಾ ಹೇಳಿತ್ತು. ಇದರ ಜೊತೆಗೆ ಕೊರೊನಾವೈರಸ್ ವಿರುದ್ಧ ಹೋರಾಡಲು ಅಗತ್ಯವಿರುವ ಎಲ್ಲ ವೈದ್ಯಕೀಯ ಸಾಮಗ್ರಿಗಳನ್ನು ಸರಬರಾಜು ಮಾಡಲಾಗುವುದು ಎಂದು ಘೋಷಿಸಿತ್ತು.

ಪ್ರಮುಖ ಸುದ್ದಿ :-   2 ಕ್ಷೇತ್ರಗಳಲ್ಲಿ ಒಂದೇ ಪಕ್ಷದ ತಲಾ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ;ತಾವೇ ಅಧಿಕೃತ ಅಭ್ಯರ್ಥಿಗಳೆಂದು ಹಕ್ಕು ಮಂಡನೆ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement