ಮಹತ್ವದ ಆದೇಶ..ರಾಜ್ಯ ಸರ್ಕಾರದ ಕೆಲ ಇಲಾಖೆ ನೌಕರರಿಗೆ ಹಾಜರಾತಿಯಿಂದ ವಿನಾಯ್ತಿ..! ಯಾವೆಲ್ಲ..?

ಬೆಂಗಳೂರು : ಕರ್ನಾಟಕದಲ್ಲಿ ಕೊರೊಒನಾ ಉಲ್ಬಣ ಕೋಲಾಹಲವನ್ನೇ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 14 ದಿನ ಕೊರೊನಾ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಇದಕ್ಕೆ ಪೂರಕವಾಗಿ ಅಗತ್ಯ ಸೇವೆಗಳ ಹೊರತಾಗಿ ರಾಜ್ಯ ಸರ್ಕಾರ ಕೆಲ ಇಲಾಖೆಗಳಿಗೆ ಹಾಜರಾತಿಯಿಂದ ವಿನಾಯ್ತಿ ನೀಡಿದ್ದು ಇನೂ ಕೆಲ ಇಲಾಖೆಗಳಿಗೆ ಶೇ.50ರಷ್ಟು ಸಿಬ್ಬಂದಿಗೆ ಹಾಜರಾತಿಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ.

ಇದು ಮೇ 12ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶ ಹೇಳಿದೆ.
ಈ ಕುರಿತು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ ಮತ್ತು ಕಂದಾಯ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇನ್ನುಳಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಕೃಷಿ ಇಲಾಖೆ, ಕಾರ್ಮಿಕ ಇಲಾಖೆ,ಇಂಧನ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಆರ್ಥಿಕ ಇಲಾಖೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ವಾಣಿಜ್ಯ, ಕೈಗಾರಿಕಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಶೇ.50 ಹಾಜರಾತಿಯಲ್ಲಿ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಉಳಿದ ಎಲ್ಲ ಇತರ ಇಲಾಖೆಗಳ ಅಧಿಕಾರಿ, ನೌಕರರುಗಳಿಗೆ, ಕಚೇರಿ ಹಾಜರಾತಿಯಿಂದ ವಿನಾಯಿತಿ ನೀಡಲಾಗಿರುತ್ತದೆ. ಹೀಗೆ ಹಾಜರಾತಿಯಿಂದ ವಿನಾಯಿತಿ ನೀಡಲ್ಪಟ್ಟ ಇಲಾಖೆಯ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಇಚ್ಛಿಸಿದಲ್ಲಿ, ಅವರು ಬಯಸುವ ಅಧಿಕಾರಿ, ನೌಕರರುಗಳು ಯಾವುದೇ ಕಾರಣ ನೀಡದೇ ಕಚೇರಿಗೆ ಹಾಜರಾಗಬೇಕುಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ಅಲ್ಲದೆ ಕೋವಿಡ್‌ ಕರ್ತವ್ಯದಲ್ಲಿದ್ದವರು ಯಾವುದೇ ಕಾರಣಕ್ಕೂ ಹಾಜರಾಗತಕ್ಕದ್ದು ಎಂದು ಆದೇಶ ಹೇಳಿದೆ. ಇದಲ್ಲದೆ ದೈಹಿಕ ದೃಷ್ಟಿಹೀನ ಹಾಗೂ ಇತರೆ ಅಂಗೈವೈಕಲ್ಯ ಹೊಂದಿರುವ ಸಿಬ್ಬಂದಿ ಹಾಗೂ ಗರ್ಭಿಣಿ ಉದ್ಯೋಗಿಗಳಿಗೆ ಕೆಲಸದಿಂದ ವಿನಾಯ್ತಿ ನೀಡಲಾಗಿದೆ ಎಂದು ಆದೇಶ ತಿಳಿಸಿದೆ.

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement