ಮಾಜಿ ಸಂಸದ ಸಿದ್ನಾಳ ನಿಧನ

posted in: ರಾಜ್ಯ | 0

ಬೆಳಗಾವಿ : ನಾಲ್ಕು ಬಾರಿ ಕಾಂಗ್ರೆಸ್‌ ಸಂಸದರಾಗಿದ್ದ ಹಿರಿಯ ರಾಜಕಾರಣಿ ಎಸ್.ಬಿ.ಸಿದ್ನಾಳ (86) ಮಂಗಳವಾರ ನಿಧನರಾದರು.
ಉದ್ಯಮಿಗಳಾದ ಶಶಿಕಾಂತ ಸಿದ್ನಾಳ ಹಾಗೂ ಶಿವಕಾಂತ ಸಿದ್ನಾಳ ಇವರ ಪುತ್ರರು.
ಅವರು 7,8,9,10ನೆಯ ಲೋಕಸಭೆಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ  ನಾಲ್ಕು ಬಾರಿ ಆಯ್ಕೆಯಾಗಿದ್ದರು. ವೃತ್ತಿಯಲ್ಲಿ ವಕೀಲರಾಗಿದ್ದ ಅವರು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದಿದ್ದರು. 1972ರಲ್ಲಿ ಕಿತ್ತೂರು ವಿಧಾನಸಭಾ ಚುನಾವಣೆಯಲ್ಲಿ ಬಿ.ಡಿ.ಇನಾಂದಾರ ಅವರ ವಿರುದ್ದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. 1979ರಲ್ಲಿ ಬಾರ್‌ ಅಸೊಸಿಯೇಶನ್‌ ಅಧ್ಯಕ್ಷರಾಗಿದ್ದರು.
ಬೈಲಹೊಂಗಲ ತಾಲೂಕು ಸಾಣಿಕೊಪ್ಪದ ಇವರ ಅಂತ್ಯಕ್ರಿಯೆ ಸಾಣಿಕೊಪ್ಪದಲ್ಲಿ ಮಂಗಳವಾರ ಸಂಜೆ 5 ಗಂಟೆಗೆ ನಡೆಯಲಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ