ಸ್ವೀಕರ್‌ ಕಾಗೇರಿ, ಸಭಾಪತಿ ಹೊರಟ್ಟಿಗೆ ಕೊರೊನಾ ಸೋಂಕು

ಬೆಂಗಳೂರು : ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಸಭಾಪತಿ ಬಸವರಾಜ್ ಹೊರಟ್ಟಿ ಅವರ ಆಪ್ತ ಕಾರ್ಯದರ್ಶಿ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿಯವರು ಕೋವಿಡ್-19 ತಪಾಸಣೆ ಮಾಡಿಸಿದ್ದು, ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಯಾವುದೇ ಕೋವಿಡ್-19 ಸಂಬಂಧಿಸಿದ ರೋಗ ಲಕ್ಷಣಗಳು ಇರುವುದಿಲ್ಲ ಮತ್ತು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಸರ್ಕಾರದ ಕೋವಿಡ್-19 ಮಾರ್ಗಸೂಚಿಗಳ ಪ್ರಕಾರ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಸಭಾಪತಿಗಳ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತವಾಗಿ ಕೋವಿಡ್-19 ತಪಾಸಣೆ ಮಾಡಿಸಿಕೊಳ್ಳಬೇಕೆಂದು ಕೋರಿದ್ದಾರೆ.
ವಿಧಾಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಆಪ್ತ ಕಾರ್ಯದರ್ಶಿ ಮಾಹಿತಿ ನೀಡಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. ಮನೆಯಲ್ಲೇ ಕೊರೋನಾ ಸೋಂಕಿನ ಚಿಕಿತ್ಸೆಯನ್ನು ವೈದ್ಯರ ಸೂಚನೆ ಮೇರೆಗೆ ಪಡೆಯುತ್ತಿದ್ದಾರೆ. ಅವರ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತವಾಗಿ ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ಕೋವಿಡ್-19 ಪರೀಕ್ಷಾ ವರದಿ ಪಾಸಿಟಿವ್ ಬಂದಿರುವುದು ತಿಳಿಯುತ್ತಿದ್ದಂತೆ ಕಾಗೇರಿಯವರು ತಮ್ಮ ಊರಾದ ಶಿರಸಿಯ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.  ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement