ಬಿಪಿಎಲ್‌, ಅಂತ್ಯೋದಯ ಪಡಿತರ ಚೀಟಿಗೆ ಮೇ 10ರಿಂದ ಉಚಿತ ದಿನಸಿ ಅಕ್ಕಿ ವಿತರಣೆ

ನವ ದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳುಗಳಲ್ಲಿ ದೇಶದಲ್ಲಿ ಕೋವಿಡ್-19 ಉಲ್ಬಣದಿಂದ ಉಂಟಾದ ಆರ್ಥಿಕ ಅಡಚಣೆಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, 2013 ರ ಅಡಿ ಬಡವರಿಗೆ ಸರ್ಕಾರ 5 ಕಿಲೋಗ್ರಾಂ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಿದೆ ಎಂದು ಕೇಂದ್ರ ಶುಕ್ರವಾರ ಹೇಳಿದೆ.
ಅರದ ಅನ್ವಯ, ರಾಜ್ಯದಲ್ಲಿ ಮೇ 10 ರಿಂದ ಬಿಪಿಎಲ್ ಕಾರ್ಡು ಹೊಂದಿದ ಪ್ರತಿ ಸದಸ್ಯರಿಗೆ 2 ಕೆಜಿ ಅಕ್ಕಿ, 3 ಕೆಜಿ ರಾಗಿ ಮತ್ತು ಪ್ರತಿ ಕಾರ್ಡಿಗೆ 2 ಕೆಜಿ ಗೋಧಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.ಅಂತ್ಯೋದಯ ಯೋಜನೆಗೂ ಅಕ್ಕಿ ವಿತರಿಸಲಾಗುತ್ತದೆ.

ಈ ಬಗ್ಗೆ ಟ್ವಿಟ್‌ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, `ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ’ಯಡಿ ಕೇಂದ್ರ ಸರಕಾರ ಉಚಿತ ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದು, ಕೊರೊನಾ ಸಂಕಷ್ಟದ ನಡುವೆ ಬಡವರ ನೆರವಿಗೆ ಧಾವಿಸಿರುವ ಕೇಂದ್ರ ಸರಕಾರ 26 ಸಾವಿರ ಕೋಟಿ ರೂ.ವೆಚ್ಚದಲ್ಲಿ ಮೇ ಮತ್ತು ಜೂನ್ ತಿಂಗಳಿನಲ್ಲಿ 5 ಕೆ.ಜಿ. ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ 4.10 ಕೋಟಿ ಜನರಿಗೆ ಇದರ ಲಾಭವಾಗಲಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement