ಕೊರೊನಾ ಕ್ರಮ: ಎಲ್ಲ ಜಿಲ್ಲಾಧಿಕಾರಿಗಳ ಜೊತೆ ನಾಳೆ ಸಿಎಂ ಬಿಎಸ್‌ವೈ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು , ಜಿಲ್ಲಾ ಸರ್ಜನ್ ಗಳ, ಸಿಇಒಗಳು. ಎಸ್ ಪಿ, ಸರ್ಕಾರಿ ವೈದ್ಯಕೀಯ ಕಾಲೇಜುಗಳ ಡೀನ್ ಗಳ ಜೊತೆ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಕೊರೋನಾ ವಿರುದ್ಧ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳು, ಜಿಲ್ಲೆಗಳಲ್ಲಿ ವಿತರಿಸಲಾಗಿರುವ ಲಸಿಕೆ, ಸೋಂಕಿತರಿಗೆ ವೈದ್ಯಕೀಯ ಸೌಲಭ್ಯ, ಜಿಲ್ಲೆಯಿಂದ ಜಿಲ್ಲೆಗೆ ಬಂದ ಜನರ ಬಗ್ಗೆ ಯಡಿಯೂರಪ್ಪ ಮಾಹಿತಿ ಪಡೆಯಲಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement