ಬೆಂಗಳೂರಿನಿಂದ ನಾಪತ್ತೆಯಾದ 3000ಕ್ಕೂ ಹೆಚ್ಚು ಸೋಂಕಿತರು..!

posted in: ರಾಜ್ಯ | 0

ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆ ಹರಡುವಿಕೆ ಆತಂಕದ ನಡುವೆ ಬೆಂಗಳೂರಿನಿಂದ 3000ಕ್ಕೂ ಹೆಚ್ಚು ಸೋಂಕಿತರು ಕಾಣೆಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬಹುತೇಕ 3000ಕ್ಕೂ ಹೆಚ್ಚು ಕೊರೊನಾ ಸೋಂಕಿತರು ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ತಾವು ನೀಡಿರುವ ವಿಳಾಸದಿಂದಲೂ ನಾಪತ್ತೆ ಆಗಿದ್ದು,  ಪೊಲೀಸರು ಕಾಣೆಯಾಗಿರುವ ಸೋಂಕಿತರನ್ನು ಪತ್ತೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಅನೇಕರು ಕೊರೊನಾ ಸೋಂಕು ತಗುಲಿರುವ ಬಗ್ಗೆ ಸಾರ್ವಜನಿಕವಾಗಿ ಹೇಳದೇ ಮುಚ್ಚಿಡುತ್ತಿದ್ದಾರೆ. ಆ ಮೂಲಕ ಕೊವಿಡ್-19 ಸೋಂಕು ಹರಡುವುದಕ್ಕೆ ನೇರವಾಗಿ ಕಾರಣವಾಗುತ್ತಿದ್ದಾರೆ ಎಂದು ಸಚಿವ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಿಂದ ಕಾಣೆಯಾಗಿರುವ 3000ಕ್ಕೂ ಹೆಚ್ಚು ಮಂದಿ ಕೊರೊನಾವೈರಸ್ ಸೋಂಕಿತರು ಸದ್ಯ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ನಿಮ್ಮ ಆರೋಗ್ಯ ಸ್ಥಿತಿ ಹದಗೆಡುವುದಕ್ಕೂ ಮೊದಲು ಎಚ್ಚೆತ್ತುಕೊಳ್ಳಿರಿ. ನಿಮ್ಮ ಮೊಬೈಲ್ ಸ್ವಿಚ್ ಆನ್‌ ಮಾಡಿ, ಸರ್ಕಾರದಿಂದ ನೀಡುವ ಔಷಧಿ ಪಡೆದುಕೊಳ್ಳಿರಿ ಎಂದು ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರದಿಂದ ಉಚಿತವಾಗಿ ಕೊರೊನಾ ಸೋಂಕಿತರಿಗೆ ಔಷಧಿ ನೀಡುತ್ತಿದ್ದೇವೆ. ಕೊವಿಡ್-19 ಔಷಧಿಗಳಿಂದಲೇ ಸೋಂಕು ಶೇ.90ರಷ್ಟು ಕಡಿಮೆಯಾಗುತ್ತದೆ. ಆದರೆ ಈ ಹಂತದಲ್ಲಿ ಸೋಂಕಿತರು ತಮ್ಮ ಮೊಬೈನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡು ನಂತರ ಆರೋಗ್ಯ ಸ್ಥಿತಿ ಗಂಭೀರವಾದ ಸಂದರ್ಭಗಳಲ್ಲಿ ಆಸ್ಪತ್ರೆಗಳಿಗೆ ಬರುತ್ತಾರೆ. ಆಗ ಗಂಭೀರ ಸಮಸ್ಯೆ ಎದುರಿಸುತ್ತಿರುವ ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳುವುದು ಕಷ್ಟಸಾಧ್ಯವಾಗಬಹುದು ಎಂದು ಸಚಿವ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ