ಲೆಫ್ಟಿನೆಂಟ್‌ ಗವರ್ನರೇ ಇನ್ನು ದೆಹಲಿ’ಸರ್ಕಾರ’

ನವ ದೆಹಲಿ: ರಾಷ್ಟ್ರೀಯ ರಾಜಧಾನಿ ದೆಹಲಿ (ತಿದ್ದುಪಡಿ) ಕಾಯ್ದೆ-2021 ಏ. 27ರಿಂದ ಜಾರಿಗೆ ಬಂದಿದೆ.
ಈ ಕುರಿತು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ. ಈ ತಿದ್ದುಪಡಿ ಕಾಯ್ದೆಯಲ್ಲಿ ಈಗ ಚುನಾಯಿತ ಸರ್ಕಾರಕ್ಕಿಂತ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್‌ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ.
ಈ ಕಾಯ್ದೆ ಪ್ರಕಾರ, ದೆಹಲಿಯಲ್ಲಿ ‘ಸರ್ಕಾರ’ ಎಂದರೆ ‘ಲೆಫ್ಟಿನೆಂಟ್‌ ಗವರ್ನರ್‌ ಎಂದಾಗುತ್ತದೆ. ದೆಹಲಿಗೆ ಸಂಬಂಧಿಸಿ ಯಾವುದೇ ನಿರ್ಧಾರ ಹಾಗೂ ಅನುಷ್ಠಾನ ಮಾಡಬೇಕಾದರೆ ಅಲ್ಲಿನ ಸರ್ಕಾರ ಲೆಫ್ಟಿನೆಂಟ್‌ ಗವರ್ನರ್‌ ಅವರ ಅಭಿಪ್ರಾಯದಂತೆ ನಡೆಯಬೇಕಾಗುತ್ತದೆ.
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಈ ಮಸೂದೆಯನ್ನು ಮಾರ್ಚ್‌ 22ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ನಂತರ, ರಾಜ್ಯಸಭೆಯಲ್ಲಿ ಮಾರ್ಚ್‌ 24ರಂದು ಇದನ್ನು ಅಂಗೀಕರಿಸಲಾಗಿತ್ತು. ಈಗ ಅಧಿಸೂಚನೆ ಹೊರಡಿಸಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ