ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಮತ್ತೊಂದು ಬೆಂಕಿ ಅವಘಡ: ನಾಲ್ಕು ಜನರು ಸಾವು

ಮುಂಬೈ: ಮುಂಬ್ರಾ ಅವರ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ ನಾಲ್ಕು ರೋಗಿಗಳು ಮೃತಪಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಇದು ನಾಲ್ಕನೇ ದೊಡ್ಡ ಬೆಂಕಿಅವಘಡವಾಗಿದೆ.
ಇದು ಮುಂಬ್ರಾಸ್ ಕೌಸಾದಲ್ಲಿರುವ ಆಸ್ಪತ್ರೆಯು ಕೋವಿಡ್ ಅಲ್ಲದ ಆಸ್ಪತ್ರೆಯಾಗಿದ್ದು, ಬೆಂಕಿ ಕಾಣಿಸಿಕೊಂಡಾಗ 20 ಕ್ಕೂ ಹೆಚ್ಚು ರೋಗಿಗಳು ದಾಖಲಾಗಿದ್ದರು.
ಬೆಂಕಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲವದರೂ, ಕೆಲವು ವರದಿಗಳು ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಆಸ್ಪತ್ರೆಯ ಮೀಟರ್ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಈ ಅವಘಡಕ್ಕೆ ಕಾರಣ ಎಂದು ಹೇಳಿವೆ. ಮೂರು ಅಗ್ನಿಶಾಮಕ ದಳಗಳು ಮತ್ತು ಐದು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಥಾಣೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದಂತೆ ರೋಗಿಗಳನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಮುಂಬ್ರಾ-ಕಲ್ವಾದ ಎನ್‌ಸಿಪಿ ಶಾಸಕ ಜಿತೇಂದ್ರ ಅವದ್ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದರು. ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಘಟನೆಯ ತನಿಖೆ ಮತ್ತು ಮೃತರ ರಕ್ತಸಂಬಂಧಿಗಳಿಗೆ ಐದು ಲಕ್ಷ ಮತ್ತು ಗಾಯಗೊಂಡವರಿಗೆ 1 ಲಕ್ಷ ಪರಿಹಾರವನ್ನು ಟ್ವೀಟ್ ಮೂಲಕ ಘೋಷಿಸಿದರು.
ಏಳು ರೋಗಿಗಳು ಐಸಿಯುನಲ್ಲಿದ್ದಾರೆ, ಅದರಲ್ಲಿ ಮೂವರು ಗಂಭೀರ ಸ್ಥಿತಿಯಲ್ಲಿದ್ದಾರೆ. ನಷ್ಟ ಮತ್ತು ಅವಘಡಕ್ಕೆ ಕಾರಣ ಕಂಡುಹಿಡಿಯಲು ತನಿಖೆ ಪ್ರಾರಂಭಿಸಲಾಗಿದೆ ಎಂದು ಅವದ್ ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement