18 ವರ್ಷದಿಂದ ಮಲ್ಪಟ್ಟವರಿಗೆ ಮೇ 1ರಿಂದ ಲಸಿಕೆ ಪಡೆಯಲು ಆನ್‌ಲೈನ್‌ ನೋಂದಣಿ ಕಡ್ಡಾಯ, ನೇರವಾಗಿ ಹೋದ್ರೆ ಲಸಿಕೆ ನೀಡಲ್ಲ

ಮೇ 1ರಿಂದ 18ರಿಂದ 44 ವರ್ಷ ವಯಸ್ಸಿನವರಿಗೂ ಲಸಿಕೆ ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದೆ.
ಇದಕ್ಕೆ ಇಂದಿನಿಂದ (ಬುಧವಾರ) ನೋಂದಣಿ ಆರಂಭವಾಗಿದೆ. ಆದರೆ 18ರಿಂದ 44 ವರ್ಷ ವಯಸ್ಸಿನ ಜನರು ಲಸಿಕೆ ಪಡೆಯಲು ಆನ್​ಲೈನ್ ಮೂಲಕವೇ ನೋಂದಣಿ ಮಾಡಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿದೆ. ಇಂದು ಸಂಜೆ ನಾಲ್ಕು ಗಂಟೆಯಿಂದ ಹೆಸರು ನೋಂದಣಿ ಆರಂಭವಾಗಲಿದೆ‌. ಈ ವಿಭಾಗದವರು ನೇರವಾಗಿ ಲಸಿಕಾ ಕೇಂದ್ರಕ್ಕೆ ಹೋದರೆ ಲಸಿಕೆ ನೀಡುವುದಿಲ್ಲ. ಕೋವಿನ್​ ಅಥವಾ ಆರೋಗ್ಯ ಸೇತು ಆಪ್​ ಮೂಲಕ ನೋಂದಣಿ ಮಾಡಿದವರಿಗೆ ಮಾತ್ರ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ. ಲಸಿಕಾ ಕೇಂದ್ರಗಳಲ್ಲಿ ನೂಕುನುಗ್ಗಲು ಆಗದಂತೆ ತಡೆಯಲು ಈ ಕ್ರಮ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
45 ವರ್ಷ ಮೇಲ್ಪಟ್ಟ ನಾಗರಿಕರು ಆನ್​ಲೈನ್ ಅಥವಾ ನೇರವಾಗಿ ಲಸಿಕಾ ಕೇಂದ್ರಗಳಿಗೇ ಹೋಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆದರೆ 18ರಿಂದ 44 ವರ್ಷ ವಯಸ್ಸಿನವರು ಕೋವಿನ್‌ ಅಥವಾ ಆರೋಗ್ಯ ಸೇತು ಆಪ್‌ನಲ್ಲಿಯೇ ನೋದಣಿ ಮಾಡಿಕೊಳ್ಳಬೇಕಾಗಿದೆ. ಕೋವಿನ್ ಆಪ್​​ ನಲ್ಲಿ ಒಂದೇ ಸಲ 70 ರಿಂದ 80 ಲಕ್ಷ ಜನ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಸಂಬಂಧಿತ ಎಲ್ಲ ನಿಯಮಗಳನ್ನೂ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದ್ದು.ಅವುಗಳನ್ನು ಕಟ್ಟನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ.
ಖಾಸಗಿ ಆಸ್ಪತ್ರೆಗಳು ಕೋವಿನ್​ ವೆಬ್​ಸೈಟಿನಲ್ಲೇ ತಮ್ಮ ಬಳಿ ಎಷ್ಟು ಯಾವ ಲಸಿಕೆಗಳು ಎಷ್ಟು ಪ್ರಮಾಣದಲ್ಲಿ ಇದೆ, ಅವುಗಳ ವಿವರಗಳನ್ನೆಲ್ಲಾ ದಾಖಲಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳುವ ಸಾರ್ವಜನಿಕರಿಗೆ ಇದರ ಬಗ್ಗೆ ಮಾಹಿತಿ ನೀಡಿದಾಗ ಅವರು ಆಯ್ಕೆ ಮಾಡಿಕೊಳ್ಳಲು ಸುಲಭವಾಗುತ್ತದೆ ಎಂದು ಆದೇಶಿಸಲಾಗಿದೆ.
45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಪಡೆಯುವ ಅವಕಾಶ ಮುಂದುವರೆಯಲಿದೆ ಎಂದು ಸರ್ಕಾರ ತಿಳಿಸಿದೆ.

ಪ್ರಮುಖ ಸುದ್ದಿ :-   ಧರ್ಮಸ್ಥಳ ಪ್ರಕರಣ; ಚಿನ್ನಯ್ಯ ನನಗೆ ಕರೆ ಮಾಡಿದ್ದ, ಆದರೆ ಎಸ್‌ಐಟಿ ಸಂಪರ್ಕಿಸಲು ಹೇಳಿದ್ದೆ- ನಟ ಪ್ರಕಾಶ್ ರಾಜ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement