ಚುನಾವಣೋತ್ತರ ಸಮೀಕ್ಷೆ; ಬಸವಕಲ್ಯಾಣದ ತೀವ್ರ ಹಣಾಹಣಿಯಲ್ಲಿ ಜಯದ ಮಾಲೆ ಯಾರಿಗೆ..?

posted in: ರಾಜ್ಯ | 0

ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅಕಾಲಿಕ ನಿಧನದಿಂದ ನಡೆದಿದೆ. ಮೇ 2ರಂದು ಮತದಾನದ ಫಲಿತಾಂಶ ಪ್ರಕಟವಾಗಲಿದೆ.
ಕ್ಷೇತ್ರದಲ್ಲಿ ಬಿಜೆಪಿಯಿಂದ ಶರಣು ಸಲಗರ್, ಕಾಂಗ್ರೆಸ್‌ನಿಂದ ದಿ. ಬಿ. ನಾರಾಯಣರಾವ್ ಪತ್ನಿ ಮಾಲಾ, ಜೆಡಿಎಸ್‌ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಹಾಗೂ ಮಲ್ಲಿಕಾರ್ಜುನ ಖೂಬಾ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಗುರುವಾರ . ಪಬ್ಲಿಕ್ ಟಿವಿ ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ಚುನಾವಣೋತ್ತರ ಸಮೀಕ್ಷೆ ಪ್ರಕಟಿಸಿದೆ. ಸಮೀಕ್ಷೆಯ ಪ್ರಕಾರ ಕಡಿಮೆ ಅಂತರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಬಿಜೆಪಿ ಪ್ರಬಲ ಪೈಪೋಟಿ ನೀಡಲಿದೆ ಎಂದು ಅಂದಾಜಿಸಿದೆ.
ಸಮೀಕ್ಷೆಯ ವರದಿ ಪ್ರಕಾರ ಬಿಜೆಪಿ ಶೇ 49ರಷ್ಟು ಮತಗಳನ್ನು ಪಡೆಯಲಿದೆ. ಕಾಂಗ್ರೆಸ್ ಶೇ 51ರಷ್ಟು ಮತಗಳನ್ನು ಪಡೆಯಲಿದೆ. ಅಂತಿಮವಾಗಿ ಕಡಿಮೆ ಅಂತರದಲ್ಲಿ ಕಾಂಗ್ರೆಸ್‌ಗೆ ಜಯ ಸಿಗಲಿದೆ ಎಂದು ಅಂದಾಜಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ